ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು, ಮಾ. ೬: ರಾಜ್ಯದಲ್ಲಿ ೨೬ ಹೆಚ್ ೩ಎನ್ ೨ ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ ೩ಎನ್ ೨ ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು.ಮಕ್ಕಳು, ೬೫ ವರ್ಷಕ್ಕಿಂತ ಮೇಲ್ಪಟ್ಟವರು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ಗರ್ಭಿಣಿಯರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ, ಅನಾವಶ್ಯಕವಾಗಿ ಗುಂಪು ಸೇರದಂತೆ ಮತ್ತು ಶುಚಿತ್ವದ ಕಡೆ ಗಮನ ಹರಿಸುವಂತೆ ಸಲಹೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಳ ಕುರಿತು ಚರ್ಚೆ ನಡೆಸಲಾಗಿದೆ. ಪ್ರತಿ ದಿನ ೨ ರಿಂದ ೩ ಲೀಟರ್ ನೀರು ಸೇವಿಸುವ ಮೂಲಕ ದೇಹದಲ್ಲಿ ನೀರಿನ ಕೊರತೆಯಾಗದಂತೆ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಬಿರು ಬೇಸಿಗೆ ಸಂದರ್ಭದಲ್ಲಿ ಮಜ್ಜಿಗೆ, ಎಳನೀರು, ನಿಂಬೆ ಹಣ್ಣಿನ ರಸ ಸೇವಿಸುವಂತೆಯೂ ಜನರಿಗೆ ಸಲಹೆ ನೀಡಲಾಗಿದೆ ಎಂದರು.

ಶೀಘ್ರದಲ್ಲೇ ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ವಿಚಾರಣೆ

ಪಾಟ್ನಾ, ಮಾ. ೬: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬAಧಿಸಿದAತೆ ಬಿಹಾರ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ತಿಳಿಸಿದೆ. ಈ ಸಂಬAಧ ಸಿಬಿಐ ಕೆಲವು ದಿನಗಳ ಹಿಂದೆ ಲಾಲು ಪ್ರಸಾದ್ ಯಾದವ್ ಅವರಿಗೆ ನೋಟಿಸ್ ನೀಡಿತ್ತು ಎಂದು ಅವರು ಹೇಳಿದ್ದಾರೆ. ‘ಕೆಲವು ದಿನಗಳ ಹಿಂದೆ, ಉದ್ಯೋಗಕ್ಕಾಗಿ ಜಮೀನು ಪ್ರಕರಣಕ್ಕೆ ಸಂಬAಧಿಸಿದAತೆ ಸಿಬಿಐ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ನೋಟಿಸ್ ನೀಡಿತ್ತು. ಸಿಬಿಐ ಶೀಘ್ರದಲ್ಲೇ ಲಾಲು ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ’ ಎಂದು ಸಿಬಿಐ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಇಂದು ಬೆಳಗ್ಗೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬAಧಿಸಿದAತೆ ಲಾಲು ಪ್ರಸಾದ್ ಯಾದವ್ ಅವರ ಪತ್ನಿ, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಲಾಲು ಪ್ರಸಾದ್ ಯಾದವ್, ರಾಬ್ಡಿ ದೇವಿ, ಅವರ ಪುತ್ರಿ ಮೀಸಾ ಭಾರತಿ ಮತ್ತು ಇತರ ೧೩ ಮಂದಿ ವಿರುದ್ಧ ಸಿಬಿಐ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚಾರ್ಜ್ಶೀಟ್ ಸಲ್ಲಿಸಿತ್ತು.

ಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ನೇಮಕ

ಅಗರ್ತಲ, ಮಾ. ೬: ಬಿಜೆಪಿ ನಾಯಕ ಮಾಣಿಕ್ ಸಹಾ ಅವರು ಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಅಗರ್ತಲಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಣಿಕ್ ಸಹಾ ಅವರನ್ನು ತ್ರಿಪುರಾದ ಮುಂದಿನ ಮುಖ್ಯಮಂತ್ರಿ ಎಂದು ಹೆಸರಿಸಲಾಯಿತು. ಈ ಆಯ್ಕೆಯನ್ನು ಪಕ್ಷದ ಎಲ್ಲಾ ಶಾಸಕರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಶಾಸಕಾಂಗ ಸಭೆಯ ನಂತರ ಬಿಜೆಪಿಯ ವಕ್ತಾರರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರನ್ನು ತ್ರಿಪುರ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬಹುದು ಎಂಬ ಊಹಾಪೋಹ ಇತ್ತು. ಆದರೆ ಮಾಣಿಕ್ ಸಹಾ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಮಾಣಿಕ್ ಸಹಾ ಅವರು ತಾ. ೮ ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಶಂಕಿತ ಉಗ್ರ ಶಾರಿಕ್ ೧೦ ದಿನ ಎನ್‌ಐಎ ವಶಕ್ಕೆ

ಮಂಗಳೂರು, ಮಾ. ೬: ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ತಾ. ೧೫ರ ವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ. ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತಗೆ ಉಗ್ರ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡೂವರೆ ತಿಂಗಳ ಬಳಿಕ ಇಂದು ಆತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾರಿಕ್ ನನ್ನು ಎನ್‌ಐಎ ಬೆಂಗಳೂರಿನ ವಿಶೇಷ ಎನ್‌ಐಎ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆತನನ್ನು ೧೦ ದಿನಗಳ ಎನ್‌ಐಎ ಕಸ್ಟಡಿಗೆ ನೀಡಿದೆ. ೨೦೨೨ರ ನವೆಂಬರ್ ೧೯ ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡು ಶಾರಿಕ್ ಗಾಯಗೊಂಡಿದ್ದನು.

ಮನೆಗಳಿಗೆ ಬೆಂಕಿ ಹಚ್ಚಿದ ೨೫ ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ, ಮಾ. ೬: ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು ೨೫ ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಕ್ಕ ಪಕ್ಕದಲ್ಲಿರುವ ಎರಡು ಮನೆಗಳಲ್ಲಿ ೧೨ ಮಂದಿ ಕುಟುಂಬ ಸದಸ್ಯರು ಮಲಗಿದ್ದರು. ಗ್ರಾಮಸ್ಥರ ಗುಂಪು ದಲಿತ ಕಾಲೋನಿಯ ಮನೆಗಳಿಗೆ ನುಗ್ಗಿ ಪೆಟ್ರೋಲ್, ಕಟ್ಟಿಗೆ ಎಸೆಯಲು ಆರಂಭಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲ ಮನೆಯನ್ನು ಸುಟ್ಟು ಹಾಕಿದರು. ಹೊಗೆಯನ್ನು ಗಮನಿಸಿದ ಕುಟುಂಬಸ್ಥರು ಮನೆಯಿಂದ ಹೊರಬಂದು ಪ್ರಾಣ ರಕ್ಷಣೆಗಾಗಿ ಗ್ರಾಮದಿಂದ ಓಡಿ ಹೋದರು. ಇದೀಗ ಜಿಲ್ಲೆಯ ವಿವಿಧ ಗ್ರಾಮಗಳ ಸಂಬAಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಹಾವೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿಯ ಹಿರಿಯ ಪೊಲೀಸ್ ಅಧಿಕಾರಿಗಳು ಇದೀಗ ರಾಣೆಬೆನ್ನೂರಿಗೆ ಬಂದಿಳಿದಿದ್ದಾರೆ. ಈವರೆಗೆ ಇಬ್ಬರು ಶರಣಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮನೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಭಾಗಿಯಾದ ಗ್ರಾಮಸ್ಥರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಭಾನುವಾರ ಗ್ರಾಮದ ದಲಿತ ಕಾಲೋನಿಯಿಂದ ಧಾರ್ಮಿಕ ಮೆರವಣಿಗೆ ಸಾಗುತ್ತಿದ್ದಾಗ ಜಗಳ ಪ್ರಾರಂಭವಾಯಿತು. ದ್ಯಾಮವ್ವ ದೇವಿಯ ಗ್ರಾಮ ಜಾತ್ರೆ ಇದ್ದು, ಸಂಜೆ ವೇಳೆಗೆ ಮೆರವಣಿಗೆ ಏರ್ಪಡಿಸಲಾಗಿತ್ತು. ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಚಿಕ್ಕಮಕ್ಕಳು ಹಾಗೂ ಯುವಕರು ಮೆರವಣಿಗೆಯ ಜತೆಗೆ ಕುಣಿಯಲು ಮುಂದಾದಾಗ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ, ಜಾತ್ರೆಗೆ ದಲಿತ ಕುಟುಂಬಗಳು ಸೇರಬಾರದು ಎಂದು ಹೇಳಿದರು. ಇದರಿಂದ ಎರಡೂ ಕಡೆಯವರಿಗೆ ಉಂಟಾದ ಜಗಳದಿಂದಾಗಿ, ರಾತ್ರಿಯಲ್ಲಿ ಆರೋಪಿ ಗ್ರಾಮಸ್ಥರು ದಲಿತರ ಮನೆಯನ್ನು ಸುಡಲು ಪ್ರಯತ್ನಿಸಿದರು. ನೆರೆಹೊರೆಯವರು ಸಮಯಕ್ಕೆ ಬಂದು ಯಾವುದೇ ದುರಂತದ ಮೊದಲು ಬೆಂಕಿಯನ್ನು ನಂದಿಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಧ್ವಂಸಕ ಕೃತ್ಯಕ್ಕೆ ಸಂಚು: ಬಂಟ್ವಾಳದಲ್ಲಿ ತೀವ್ರ ಶೋಧ

ಮಂಗಳೂರು, ಮಾ. ೬: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟಿçÃಯ ತನಿಖಾ ಸಂಸ್ಥೆ ಅಧಿಕಾರಿಗಳು ಸೋಮವಾರ ಬಂಟ್ವಾಳದ ವಿವಿಧೆಡೆ ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ. ಶಂಕಿತ ಆರೋಪಿಗಳಿಗೆ ನೆರವಾದವರ ಪತ್ತೆ ಸಲುವಾಗಿ ರಾಷ್ಟಿçÃಯ ತನಿಖಾ ಸಂಸ್ಥೆಯು ತಂಡ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹಲವೆಡೆ ಶೋಧ ನಡೆಸುತ್ತಿದೆ. ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ವರ್ಗಾವಣೆ ಆಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.