ಸಿದ್ದಾಪುರ, ಮಾ. ೬: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ದರ ಏರಿಕೆಯನ್ನು ಖಂಡಿಸಿ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಹೋರಾಟದ ಎಚ್ಚರಿಕೆ ನೀಡಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಪ್ರಾರಂಭದಲ್ಲಿ ಬಡವರಿಗೆ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ನೀಡುವಾಗ ತುಂಬಾ ಖುಷಿ ಆಯಿತು. ಆದರೆ ನಂತರದ ದಿನಗಳಲ್ಲಿ ಸಬ್ಸಿಡಿ ಖಡಿತಗೊಳಿಸಿದ ಕೇಂದ್ರ ಸರಕಾರ ರೂ.೪೫೦ಕ್ಕೆ ಸಿಗುತ್ತಿದ್ದ ಅಡುಗೆ ಅನಿಲವನ್ನು ನಿರಂತರ ಏರಿಕೆ ಮಾಡಿ ಇದೀಗ ರೂ. ೧೨೫೦ ಗೆ ತಲುಪಿಸಿ ಗ್ರಾಮೀಣ ಪ್ರದೇಶದ ಜನರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರಾದ ಎನ್.ಡಿ.ಕುಟ್ಟಪ್ಪನ್, ಮುಸ್ತಫ, ಅನಿಲ್ ಸೇರಿದಂತೆ ಮೂವತ್ತಕ್ಕೂ ಅಧಿಕ ಮಂದಿ ಹಾಜರಿದ್ದರು.