ವೀರಾಜಪೇಟೆ, ಮಾ. ೬: ವೀರಾಜಪೇಟೆಯಲ್ಲಿ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಬಾಳುಗೋಡು ಗ್ರಾಮದ ಕಾವೇರಿ ಕಾಲೇಜು ಸಮೀಪವಿರುವ ೧.೫೦ ಎಕರೆ ಜಾಗದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರುಗಳು ಭೂಮಿಪೂಜೆ ನೆರವೇರಿಸಿದರು.

ಭೂಮಿಪೂಜೆ ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎ.ಎಸ್. ಬೋಪಣ್ಣ, ಹೈಕೋರ್ಟಿನ ನ್ಯಾಯಮೂರ್ತಿಗಳು ಕೊಡಗಿನ ಆಡಳಿತಾತ್ಮಕ

(ಮೊದಲ ಪುಟದಿಂದ) ನ್ಯಾಯಮೂರ್ತಿಗಳಾದ ಶ್ರೀಶಾನಂದ ಅವರ ಕಾಳಜಿಯಿಂದಾಗಿ ಕೊಡಗಿನಲ್ಲಿ ನ್ಯಾಯಾಲಯದ ಕಟ್ಟಡಗಳು ನಿರ್ಮಾಣ ವಾಗುತ್ತಿವೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಗಳಾದ ಪ್ರಸನ್ನ ಬಿ.ವರಾಳೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಜ್ಯ ಉಚ್ಚನ್ಯಾಯಾಲಯದ ಕೊಡಗು ಆಡಳಿತಾತ್ಮಕ ನ್ಯಾಯಾಧೀಶರಾದ ಶ್ರೀಶಾನಂದ, ರಾಜ್ಯ ಉಚ್ಚನ್ಯಾಯಾಲ ಯದ ನ್ಯಾಯಾಧೀಶರಾದ ಶುಕುರೆ ಕಮಾಲ್, ರಾಜ್ಯ ಉಚ್ಚನ್ಯಾಯಾಲ ಯದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ, ಉಚ್ಚ ನ್ಯಾಯಾಲಯದ ಮಹಾವಿಲೇಖನಾಧಿಕಾರಿ ಕೆ.ಎಸ್. ಭರತ್‌ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕÀ ರಾಮರಾಜನ್, ಕೊಡಗು ಜಿಲ್ಲಾ ಪಂಚಾಯಿತಿ ಸಿಇಓ ಡಾ. ಆಕಾಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಜಿ ಲೋಕೇಶ್ ಉಪಸ್ಥಿತರಿದ್ದರು.

ವೀರಾಜಪೇಟೆ ವಕೀಲರ ಸಂಘದÀ ಅಧ್ಯಕ್ಷರು, ಪದಾಧಿಕಾರಿಗಳು, ವಕೀಲರುಗಳು ಹಾಜರಿದ್ದರು. ಈ ಸಂದರ್ಭ ಎಲ್ಲಾ ವಿಶೇಷ ಆಹ್ವಾನಿತರನ್ನು ಜಿಲ್ಲಾ ನ್ಯಾಯಾಂಗ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.