ಸೋಮವಾರಪೇಟೆ, ಮಾ. ೬: ಇಲ್ಲಿನ ಜಿ.ಎಂ.ಪಿ. ಶಾಲೆಯ ಚೆನ್ನಬಸಪ್ಪ ಸಭಾಂಗಣದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಬಾಲಚೇತನ ಶಿಬಿರ ನಡೆಯಿತು.
ಶಿಬಿರದಲ್ಲಿ ೨೫೦ ಮಕ್ಕಳು ಭಾಗವಹಿಸಿದ್ದರು. ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಅವರು ಮಕ್ಕಳಿಗೆ, ಯೋಗ, ಪ್ರಾಣಾಯಾಮ, ಧ್ಯಾನ ಅಭ್ಯಾಸ ಮಾಡಿಸಿ, ಪ್ರತಿನಿತ್ಯ ಅಭ್ಯಾಸ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಹಾಗೂ ಶಿಕ್ಷಕರು, ಸಂಸ್ಥೆಯ ಸ್ವಯಂ ಸೇವಕರಾದ ದಿವ್ಯಮೋಹನ್, ಪ್ರಮೀಳಾ, ಅನಿತಾ ಆನಂದ್ ಇದ್ದರು.