ಕೇಂದ್ರಕ್ಕೆ ಲಾಲು ಪುತ್ರಿ ರೋಹಿಣಿ ಆಚಾರ್ಯ ಎಚ್ಚರಿಕೆ

ನವದೆಹಲಿ, ಮಾ. ೭: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬAಧಿಸಿದAತೆ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ತಂದೆಗೆ ಮೂತ್ರಪಿಂಡ ದಾನ ಮಾಡಿರುವ ಲಾಲು ಪುತ್ರಿ ರೋಹಿಣಿ ಆಚಾರ್ಯ ಅವರು, ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಂದೆಗೆ "ಕಿರುಕುಳ" ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಿಂಗಾಪುರದಲ್ಲಿರುವ ರೋಹಿಣಿ ಆಚಾರ್ಯ ಅವರು, ತಮ್ಮ ತಂದೆ ರೈಲ್ವೇ ಸಚಿವರಾಗಿದ್ದ ಅವಧಿಗೆ ಸಂಬAಧಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಸಿಬಿಐ ವಿಚಾರಣೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. "ಇವರು ನಮ್ಮ ತಂದೆಗೆ ಕಿರುಕುಳ ನೀಡುತ್ತಿದ್ದಾರೆ. ಈ ಕಿರುಕುಳದಿಂದ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆಯಾದರೆ, ನಾವು ದೆಹಲಿಯ ಅಧಿಕಾರದ ಗದ್ದುಗೆಯನ್ನು ಅಲುಗಾಡಿಸುತ್ತೇವೆ. ತಾಳ್ಮೆ ಮೀರುತ್ತಿದೆ" ಎಂದು ರೋಹಿಣಿ ಆಚಾರ್ಯ ಅವರು ಟ್ವೀಟ್ ಮಾಡಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರು ಕಳೆದ ವರ್ಷ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದು, ಒಂದು ತಿಂಗಳ ಹಿಂದೆ ಭಾರತಕ್ಕೆ ಮರಳಿದ್ದರು. ಸೋಂಕಿನ ಹೆಚ್ಚಿನ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಮಾಸ್ ಲೀಡರ್ ತನ್ನ ತವರು ರಾಜ್ಯದಿಂದ ದೂರ ಉಳಿಯಲು ಮತ್ತು ರಾಜ್ಯಸಭಾ ಸದಸ್ಯರಾಗಿರುವ ಭಾರತಿ ಅವರ ನಿವಾಸದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ನಮ್ಮ ಬಳಿ ದಾಖಲೆ ಇದೆ-ವಾಪಸ್ ಪಡೆಯುತ್ತೇವೆ: ಮಾಡಾಳ್ ವಿರೂಪಾಕ್ಷಪ್ಪ

ದಾವಣಗೆರೆ, ಮಾ. ೭: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬAಧಿಸಿದAತೆ ಎ೧ ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರು ಆರು ದಿನಗಳ ನಂತರ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸಕ್ಕೆ ವಾಪಸ್ ಆಗಿದ್ದು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ದಾರೆ. ಅಲ್ಲದೇ ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಡಾಳ್ ವಿರೂಪಾಕ್ಷಪ್ಪ, ನಾನು ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಎಲ್ಲಾ ಹಣಕ್ಕೂ ನಮ್ಮ ಬಳಿ ಸೂಕ್ತ ದಾಖಲೆ ಇದೆ. ಆ ಹಣವನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ. ನನ್ನ ವಿರುದ್ಧ ಯಾರೋ ಷಡ್ಯಂತ್ರ ನಡೆಸಿದ್ದಾರೆ. ಒಂದು ಆಡಳಿತ ಪಕ್ಷದ ಶಾಸಕರ ಮೇಲೆ ದಾಳಿ ನಡೆದಿದ್ದು ಇತಿಹಾಸದಲ್ಲೇ ಮೊದಲು ಎಂದು ಮಾಡಾಳ್ ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.

ಬಿಜೆಪಿಗೆ ‘ಶಾಶ್ವತವಾಗಿ' ಅಧಿಕಾರದಲ್ಲಿರುವ ಭ್ರಮೆ-ರಾಹುಲ್ ಗಾಂಧಿ

ಲAಡನ್, ಮಾ. ೭: ಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಲಂಡನ್‌ನ ಚಥಮ್ ಹೌಸ್ ಥಿಂಕ್ ಟ್ಯಾಂಕ್‌ನಲ್ಲಿ ಸೋಮವಾರ ಸಂಜೆ ನಡೆದ ಸಂವಾದದಲ್ಲಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, ದೇಶದಲ್ಲಿ ಭಿನ್ನಾಭಿಪ್ರಾಯ ಹತ್ತಿಕ್ಕುವ ಯತ್ನ ನಡೆಯುತ್ತಿದ್ದು, ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಅನ್ನು ತಮ್ಮ ಫೋನ್‌ನಲ್ಲಿ ಹಾಕಲಾಗಿದೆ ಎಂದು ಮತ್ತೊಮ್ಮೆ ಆರೋಪಿಸಿದರು. "ಅಧಿಕಾರದ ದೃಷ್ಟಿಕೋನದಲ್ಲಿ ಹೇಳುವುದಾದರೆ, ಸ್ವಾತಂತ್ರ‍್ಯದಿAದ ಇಲ್ಲಿಯವರೆಗಿನ ಬಹುಪಾಲು ಸಮಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ" ಎಂದು ರಾಹುಲ್ ಗಾಂಧಿ ಹೇಳಿದರು. "ಬಿಜೆಪಿ ೧೦ ವರ್ಷಗಳ ಹಿಂದೆ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ನಾವು ೧೦ ವರ್ಷ ಅಧಿಕಾರದಲ್ಲಿದ್ದೆವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತಾನೇ ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತೇನೆ ಎಂದು ನಂಬಿದೆ. ಆದರೆ ಅದು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದ್ದಾರೆ. "ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ಹಿಡಿದಿಟ್ಟುಕೊಳ್ಳಲು ಅವರು(ಬಿಜೆಪಿ) ಯಶಸ್ವಿಯಾಗಿದ್ದಾರೆ. ಇದು ತುಂಬಾ ಅಪಾಯಕಾರಿ. ನಿಸ್ಸಂಶಯವಾಗಿಯೂ ಸ್ವಾತಂತ್ರ‍್ಯದ ಕಲ್ಪನೆಯ ಮೇಲೆ, ಸ್ವತಂತ್ರ ಸಂಸ್ಥೆಗಳನ್ನು, ಸಂಪೂರ್ಣ ದುರಸ್ತಿ ಮಾಡುವ ಅಗತ್ಯವಿದೆ" ಎಂದಿದ್ದಾರೆ.