ಸೋಮವಾರಪೇಟೆ, ಮಾ. ೭: ತಾಲೂಕಿನ ಬಹುತೇಕ ಶಾಲೆಗಳಿಗೆ ಬಿಸಿಯೂಟ ಸಾಮಗ್ರಿಗಳು ಸರಬರಾಜು ಆಗದ ಹಿನ್ನೆಲೆಯಲ್ಲಿ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಲೆಗಳ ಶಿಕ್ಷಕರು ಆರೋಪಿಸಿದ್ದಾರೆ.

ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕೆಲವು ತಿಂಗಳುಗಳಿAದ ಸಾಮಗ್ರಿಗಳ ಸರಬರಾಜಿನಲ್ಲಿ ವ್ಯತ್ಯಾಸವಾಗುತ್ತಿದೆ. ದಾಸ್ತಾನುಗಳೇ ಇಲ್ಲ. ಫೆಬ್ರವರಿ ತಿಂಗಳಿನಲ್ಲಿ ಅಕ್ಕಿ, ಬೇಳೆ, ಎಣ್ಣೆ ಸಮರ್ಪಕವಾಗಿ ಸರಬರಾಜು ಆಗಿಲ್ಲ. ಇದರಿಂದ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನಿರ್ವಹಣೆಯೇ ಕಷ್ಟಸಾಧ್ಯವಾಗಿದೆ ಎಂದು ಹಲವು ಶಾಲೆಗಳ ಮುಖ್ಯ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಲೂಕು ಪಂಚಾಯಿತಿ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳು ಇದರ ಬಗ್ಗೆ ನಿರ್ಲಕ್ಷö್ಯ ವಹಿಸಿರುವುದು ಸರಿಯಲ್ಲ. ತಕ್ಷಣ ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.