ಮಡಿಕೇರಿ, ಮಾ. ೭: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರಕಟಗೊಂಡಿದ್ದು, ಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕ ಡಾ. ಉಳ್ಳಿಯಡ ಎಂ. ಪೂವಯ್ಯ ಅವರು ಎಂ. ನಾಗೇಂದ್ರ ರಾವ್ ದತ್ತಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.