ಗೋಣಿಕೊಪ್ಪ ವರದಿ, ಮಾ. ೯: ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಬೆಟ್ಟ ಚೆಷೈರ್ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ಚೆಪ್ಪುಡೀರ ಗೀತಾ ಚೆಂಗಪ್ಪ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಪ್ರಮುಖರು ಪ್ರಶಸ್ತಿ ಪ್ರದಾನ ಮಾಡಿದರು.