ಗೋಣಿಕೊಪ್ಪಲುವಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ
ಗೋಣಿಕೊಪ್ಪಲು, ಮಾ. ೯: ಹೆಣ್ಣು ಭ್ರೂಣ ಹತ್ಯೆ ಆತಂಕಕಾರಿ ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.
ಗೋಣಿಕೊಪ್ಪಲುವಿನ ಪ್ರಾಥಮಿಕ ಶಾಲಾ ಆವರಣದ ವೇದಿಕೆಯಲ್ಲಿ ಗೋಣಿಕೊಪ್ಪ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ರಾಷ್ಟಿçÃಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ. ೫೦ ಮೀಸಲಾತಿ ನೀಡಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಈ ಬಗ್ಗೆ ಮೀಸಲಾತಿ ನೀಡಲು ಇನ್ನೂ ಕೂಡ ಸಾಧ್ಯವಾಗಿಲ್ಲ.
ಮಹಿಳೆ ರಾಜಕೀಯವಾಗಿ ಮುಂದೆ ಬಂದಲ್ಲಿ ಈ ಸಮಾಜವನ್ನು ಉತ್ತಮ ಹಾದಿಯತ್ತ ಕೊಂಡೊಯ್ಯ ಬಹುದು. ಹೆಣ್ಣಿಗೆ ತನ್ನದೆ ಆದಂತಹ ಗೌರವವಿದ್ದು ಸಮಾಜದಲ್ಲಿ ಮಹಿಳೆಗೆ ದೇವರ ಸ್ಥಾನ ನೀಡಲಾಗಿದೆ.
ಪ್ರತಿ ಮಹಿಳೆಯು ಆರ್ಥಿಕವಾಗಿ ಮುಂದೆ ಬರಲು ಯೋಜನೆ ರೂಪಿಸಿ ಕೊಳ್ಳಬೇಕು ಎಂದು ಮಹಿಳೆಯರಿಗೆ ಗೋಣಿಕೊಪ್ಪಲು, ಮಾ. ೯: ಹೆಣ್ಣು ಭ್ರೂಣ ಹತ್ಯೆ ಆತಂಕಕಾರಿ ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.
ಗೋಣಿಕೊಪ್ಪಲುವಿನ ಪ್ರಾಥಮಿಕ ಶಾಲಾ ಆವರಣದ ವೇದಿಕೆಯಲ್ಲಿ ಗೋಣಿಕೊಪ್ಪ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ರಾಷ್ಟಿçÃಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ. ೫೦ ಮೀಸಲಾತಿ ನೀಡಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಈ ಬಗ್ಗೆ ಮೀಸಲಾತಿ ನೀಡಲು ಇನ್ನೂ ಕೂಡ ಸಾಧ್ಯವಾಗಿಲ್ಲ.
ಮಹಿಳೆ ರಾಜಕೀಯವಾಗಿ ಮುಂದೆ ಬಂದಲ್ಲಿ ಈ ಸಮಾಜವನ್ನು ಉತ್ತಮ ಹಾದಿಯತ್ತ ಕೊಂಡೊಯ್ಯ ಬಹುದು. ಹೆಣ್ಣಿಗೆ ತನ್ನದೆ ಆದಂತಹ ಗೌರವವಿದ್ದು ಸಮಾಜದಲ್ಲಿ ಮಹಿಳೆಗೆ ದೇವರ ಸ್ಥಾನ ನೀಡಲಾಗಿದೆ.
ಪ್ರತಿ ಮಹಿಳೆಯು ಆರ್ಥಿಕವಾಗಿ ಮುಂದೆ ಬರಲು ಯೋಜನೆ ರೂಪಿಸಿ ಕೊಳ್ಳಬೇಕು ಎಂದು ಮಹಿಳೆಯರಿಗೆ ಉತ್ತಮ ರೀತಿಯಲ್ಲಿ ನಡೆಸು ವಂತಾಗಬೇಕೆAದರು.
ಕೆಪಿಸಿಸಿ ವಕ್ತಾರ ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆಯಡಿ ಕರ್ನಾಟಕದಲ್ಲಿ ಶೇ. ೫೦ ಮೀಸಲಾತಿಯನ್ನು ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರ. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡುತ್ತಲೇ ಬಂದಿದೆ ಎಂದರು.
ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗುವಂತಾಗಲು ಮಹಿಳೆಯರು ಹೋರಾಟ ನಡೆಸಬೇಕು. ಕಾನೂನನ್ನು ಜಾರಿ ಮಾಡಲು ಬಲಾಡ್ಯಶಕ್ತಿಗಳು ಅವಕಾಶ ನೀಡಲಿಲ್ಲ. ಇದರಿಂದ ಮೀಸಲಾತಿ ಇನ್ನೂ ಕೂಡ ಜಾರಿಯಾಗಿಲ್ಲ. ಮುಂದಿನ ದಿನದಲ್ಲಿ ಮಹಿಳೆಯರಿಗೆ ಮೀಸಲಾತಿ ಅವಶ್ಯಕತೆಯಿರುವುದರಿಂದ ಹೋರಾಟ ಅನಿವಾರ್ಯವಾಗಿದೆ.
ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬೇಕಾಗಿದೆ. ಸಂಕೋಚವನ್ನು ಬದಿಗಿಟ್ಟು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನ್ಯಾಯ ಪಡೆಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಳೆರ ಭಾರತಿ, ಕಾಂಗ್ರೆಸ್ ಹಿರಿಯ ಮುಖಂಡ, ಗೋಣಿಕೊಪ್ಪಲು ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಸೇರಿದಂತೆ ಇನ್ನಿತರ ಗಣ್ಯರು ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಿ.ಆರ್. ಪಂಕಜ, ವಲಯ ಕಾಂಗ್ರೆಸ್ ಕಾರ್ಯದರ್ಶಿಗಳಾದ ಯಾಸ್ಮಿನ್, ಖಜಾಂಚಿ ನೂರೇರ ಧನ್ಯ ರವೀಂದ್ರ, ಗೌರವ ಅಧ್ಯಕ್ಷೆ ಕೊಂಗAಡ ಮಮಿತಾ ಮುತ್ತಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತಾ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷೆ ಎಂ. ಮಂಜುಳ, ಗ್ರಾಮ ಪಂಚಾಯಿತಿ ಸದಸ್ಯರಾದ ಆರ್. ಧನಲಕ್ಷಿö್ಮ, ಸಪೂರ ಬಾನು, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಮಹಿಳಾ ದಿನಾಚರಣೆ ಅಂಗವಾಗಿ ವಾಲಗ ನೃತ್ಯ, ಫ್ಯಾಶನ್ ಶೋ, ಹೂವಿನ ಅಲಂಕಾರ ಸ್ಪರ್ಧೆ, ಹಗ್ಗಜಗ್ಗಾಟ, ಸೇರಿದಂತೆ ಸಾಂಸ್ಕೃತಿ ಕಾರ್ಯಕ್ರಮಗಳು ಮೂಡಿಬಂದವು. ಕಾರ್ಯದರ್ಶಿ ಯಾಸ್ಮಿನ್ ಸ್ವಾಗತಿಸಿ, ಖಜಾಂಚಿ ನೂರೆರ ಧನ್ಯ ವಂದಿಸಿದರು.