ಶನಿವಾರಸಂತೆ, ಮಾ. ೯: ಪಟ್ಟಣದ ಕೆ.ಎಂ. ಅಮೀರ್ ಅವರನ್ನು ಹಾಸನ ಜಿಲ್ಲಾ ಮುದ್ರಣಕಾರರ ಸಂಘದ ವತಿಯಿಂದ ಮುದ್ರಣರಂಗದ ಪಿತಾಮಹಾ ಜೋಹಾನ್ಸ್ ಗುಟೆನ್ ಬರ್ಗ್ ಅವರ ಸ್ಮರಣಾರ್ಥ ಹಾಸನದಲ್ಲಿ ನಡೆದ ಮುದ್ರಣಕಾರರ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಮಾಜಿ ಶಾಸಕ ಪ್ರೀತಂ ಜೆ. ಗೌಡ, ಹಾಸನ ಜಿಲ್ಲಾ ಮುದ್ರಣಕಾರರ ಸಂಘದ ಅಧ್ಯಕ್ಷ ಹೆಚ್.ಎಸ್. ಹೇಮಂತ್ ಕುಮಾರ್, ನಗರ ಸಭೆ ಅಧ್ಯಕ್ಷ ಆರ್. ಮೋಹನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಲಲಾಟ ಮೂರ್ತಿ, ಅಖಿಲ ಭಾರತ ಮುದ್ರಣಕಾರರ ಒಕ್ಕೂಟ ಮಾಜಿ ಅಧ್ಯಕ್ಷ ಸಿ.ಆರ್. ಜನಾರ್ಧನ್, ರಾಜ್ಯ ಮುದ್ರಣಕಾರರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಮತ್ತಿತರ ಅತಿಥಿಗಳು ಹಾಜರಿದ್ದರು.