ಮಡಿಕೇರಿ, ಮಾ. ೯ : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಜನಾಂಗ ಬಾಂಧವರ (ಅರಭಾಷಿಕ) ವಧು-ವರರ ಸಮಾವೇಶ ತಾ. ೧೧ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ.

ಅಂದು ಬೆಳಗ್ಗೆ ೯.೩೦ ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ೯೪೪೯೪೭೬೧೭೧, ೯೭೩೯೪೯೫೩೮೧ನ್ನು ಸಂಪರ್ಕಿಸಬಹುದಾಗಿದೆ.