ಮಡಿಕೇರಿ, ಮಾ. ೯: ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿಪ್ಯಾಟ್(ಮತದಾನ ಖಾತ್ರಿ ಯಂತ್ರ) ಪ್ರಾತ್ಯಕ್ಷಿಕೆಯು ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಂ. ಭೃಂಗೇಶ್ ಅವರ ಸಮ್ಮುಖದಲ್ಲಿ ಗುರುವಾರ ನಡೆಯಿತು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಸಂಬAಧಿಸಿದAತೆ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ೫೪೨ ಮತಗಟ್ಟೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಭಾರತ ಚುನಾವಣಾ ಆಯೋಗವು ಇವಿಎಂ/ ವಿವಿಪ್ಯಾಟ್‌ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ಮತದಾರರಲ್ಲಿ/ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.

ಇವಿಎಂ/ ವಿವಿಪ್ಯಾಟ್‌ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗೆ ಸಂಬAಧಿಸಿದAತೆ, ಡಮ್ಮಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎಂದು ವಿವರಿಸಿದರು.

ಜಿ.ಪಂ. ಸಿಇಓ ಡಾ. ಎಸ್. ಆಕಾಶ್, ನ್ಯಾಯಾಧೀಶರು, ವಕೀಲರ ಸಂಘದ ಉಪಾಧ್ಯಕ್ಷ ರತನ್ ತಮ್ಮಯ್ಯ, ಉಪ ವಿಭಾಗಾಧಿಕಾರಿ ಡಾ .ಯತೀಶ್ ಉಳ್ಳಾಲ್, ನ್ಯಾಯಾಂಗ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕೆ. ಕೆಂಪರಾಜು, ತಹಶೀಲ್ದಾರ್ ಕಿರಣ್ ಇತರರು ಇದ್ದರು.