ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಮಾ. ೯: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ. ಪುಟ್ಟಣ್ಣ ಅವರು ಗುರುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಪುಟ್ಟಣ್ಣ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಇಂದು ಕೆಪಿಸಿಸಿ ಕಚೇರಿಯಲ್ಲಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಸೇರಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪುಟ್ಟಣ್ಣ, ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಸರ್ಕಾರ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು. ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿಯ ಶಾಸಕರಾದ ಪುಟ್ಟಣ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ಗಮನಿಸಿ ಕಾಂಗ್ರೆಸ್ ಸೇರ್ಪಡೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಭಾರತ-ಪಾಕಿಸ್ತಾನ, ಭಾರತ-ಚೀನಾ ನಡುವೆ ಸಶಸ್ತç ಸಂಘರ್ಷ
ವಾಷಿAಗ್ಟನ್, ಮಾ. ೯: ಭಾರತ-ಪಾಕಿಸ್ತಾನ ಮತ್ತು ಭಾರತ-ಚೀನಾ ನಡುವಿನ ಸಂಭಾವ್ಯ ಸಂಘರ್ಘದೊAದಿಗೆ ಉದ್ವೀಗ್ನತೆ ಹೆಚ್ಚುವ ಆತಂಕವಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಇಂಟೆಲ್ ತನ್ನ ಜನಪ್ರತಿನಿಧಿಗಳಿಗೆ ಹೇಳಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗಳಿಗೆ ಮಿಲಿಟರಿ ಬಲದೊಂದಿಗೆ ಪ್ರತ್ಯುತ್ತರ ನೀಡುವ ಸಾಧ್ಯತೆ ಹೆಚ್ಚು ಎಂಬುದನ್ನು ಪರಿಗಣಿಸಿದೆ. ಇದು ಅಮೆರಿಕ ಗುಪ್ತಚರ ಸಮುದಾಯದ ವಾರ್ಷಿಕ ಬೆದರಿಕೆ ಮೌಲ್ಯಮಾಪನದ ಭಾಗವಾಗಿದ್ದು, ಅಮೆರಿಕದ ಉಭಯ ಸದನಗಳ ಜನಪ್ರತಿನಿಧಿಗಳು ರಾಜಕೀಯ ಮತ್ತು ವಿವಿಧ ಆಸಕ್ತಿಯ ವಿಷಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಮತ್ತು ವಿಶ್ಲೇಷಿಸುವ ಸಮಯದಲ್ಲಿ ರಾಷ್ಟಿçÃಯ ಗುಪ್ತಚರ ನಿರ್ದೇಶಕರ ಕಚೇರಿಯು ಯುಎಸ್ ಕಾಂಗ್ರೆಸ್ಗೆ ಸಲ್ಲಿಸಿದೆ. ಭಾರತ ಮತ್ತು ಚೀನಾ ದ್ವಿಪಕ್ಷೀಯ ಗಡಿ ಮಾತುಕತೆಯಲ್ಲಿ ತೊಡಗಿವೆ ಮತ್ತು ಗಡಿ ಪಾಯಿಂಟ್ಗಳನ್ನು ಬಗೆಹರಿಸಿಕೊಂಡಿವೆ. ೨೦೨೦ರಲ್ಲಿ ನಡೆದ ಉಭಯ ರಾಷ್ಟçಗಳ ಸೇನಾಪಡೆಗಳ ನಡುವಿನ ಸಂಘರ್ಷದಲ್ಲಿ ಹದಗೆಟ್ಟಿರುವ ಸಂಬAಧ ಇನ್ನೂ ಪೂರ್ಣ ಪ್ರಮಾಣದಲ್ಲಿ ಸುಧಾರಿಸಿಲ್ಲ. ಇದು ದಶಕಗಳಲ್ಲಿ ಅತ್ಯಂತ ಗಂಭೀರವಾಗಿದೆ ಎಂದು ವರದಿ ಹೇಳಿದೆ.
ನೇಪಾಳ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪೌಡೆಲ್ ಆಯ್ಕೆ
ಕಠ್ಮಂಡು, ಮಾ. ೯: ನೇಪಾಳಿ ಕಾಂಗ್ರೆಸ್ನ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ. ನೇಪಾಳಿ ಕಾಂಗ್ರೆಸ್ ಮತ್ತು ಸಿಪಿಎನ್-ಮಾವೋವಾದಿ ಸೆಂಟರ್ ಒಳಗೊಂಡ ಎಂಟು ಪಕ್ಷಗಳ ಮೈತ್ರಿಕೂಟದ ಸಾಮಾನ್ಯ ಅಭ್ಯರ್ಥಿಯಾಗಿದ್ದ ಪೌಡೆಲ್ ಅವರು ಯುಎಂಎಲ್ನ ಉಪಾಧ್ಯಕ್ಷ ಸುಭಾಷ್ ಚಂದ್ರ ನೆಂಬಾAಗ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಪೌಡೆಲ್ ಅವರು ೨೧೪ ಸಂಸತ್ ಸದಸ್ಯರ ಮತಗಳು ಮತ್ತು ೩೫೨ ಪ್ರಾಂತೀಯ ಅಸೆಂಬ್ಲಿ ಸದಸ್ಯರ ಮತವನ್ನು ಪಡೆದಿದ್ದಾರೆ. ನೇಪಾಳ ಅಧ್ಯಕ್ಷರಾಗಿ ಆಯ್ಕೆಯಾದ ನನ್ನ ಸ್ನೇಹಿತ ರಾಮಚಂದ್ರ ಪೌಡೆಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ನೇಪಾಳಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಅವರು ಟ್ವೀಟ್ ಮಾಡಿದ್ದಾರೆ. ಸಂಸತ್ತಿನ ೩೩೨ ಸದಸ್ಯರು ಮತ್ತು ಏಳು ಪ್ರಾಂತೀಯ ಅಸೆಂಬ್ಲಿಗಳಲ್ಲಿ ೫೫೦ ಸದಸ್ಯರು ಸೇರಿದಂತೆ ಒಟ್ಟು ೮೮೨ ಸದಸ್ಯರು ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾವಣೆ ಮಾಡುವ ಅರ್ಹತೆ ಪಡೆದಿದ್ದಾರೆ. ಆ ಪೈಕಿ ೫೧೮ ಪ್ರಾಂತೀಯ ಅಸೆಂಬ್ಲಿ ಸದಸ್ಯರು ಮತ್ತು ಸಂಸತ್ತಿನ ೩೧೩ ಸದಸ್ಯರು ಅಧ್ಯಕ್ಷೀಯ ಚುನಾವಣೆ ಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ವಕ್ತಾರ ಶಾಲಿಗ್ರಾಮ್ ತಿಳಿಸಿದ್ದಾರೆ.
ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್
ನವದೆಹಲಿ, ಮಾ. ೯: ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ದೆಹಲಿಯ ನಡೆದ ಸರಳ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ವಿಧಾನಸಭೆ ಪ್ರತಿಪಕ್ಷ ನಾಯಕ ರಾಮವೀರ್ ಸಿಂಗ್ ಅವರ ಉಪಸ್ಥಿತರಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟಕ್ಕೆ ಹೊಸದಾಗಿ ನೇಮಕಗೊಂಡ ಅತಿಶಿ ಅವರಿಗೆ ಶಿಕ್ಷಣ, ಲೋಕೋಪಯೋಗಿ, ವಿದ್ಯುತ್ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಿದ್ದಾರೆ. ಇನ್ನು ಸೌರಭ್ ಭಾರದ್ವಾಜ್ ಅವರಿಗೆ ಆರೋಗ್ಯ, ನೀರು ಮತ್ತು ಕೈಗಾರಿಕೆ ಹಾಗೂ ನಗರಾಭಿವೃದ್ಧಿಯನ್ನು ಹಂಚಿಕೆ ಮಾಡಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಂದ ತೆರವಾದ ಸಚಿವ ಸ್ಥಾನಗಳನ್ನು ಶಾಸಕರಿಗೆ ನೀಡಲಾಗಿದೆ.
ವಿಧಾನಸಭಾ ಚುನಾವಣೆ: ಕರ್ನಾಟಕಕ್ಕೆ ಚುನಾವಣಾ ಆಯೋಗದ ತಂಡ ಆಗಮನ
ಬೆಂಗಳೂರು, ಮಾ. ೯: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿತು. ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರನ್ನೊಳಗೊಂಡ ತಂಡ ಕರ್ನಾಟಕಕ್ಕೆ ಮೂರು ದಿನಗಳ ಭೇಟಿ ನೀಡಿದ್ದು, ಮೇ ವೇಳೆಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯ ರಾಜಧಾನಿ ತಲುಪಿದ ನಂತರ ತಂಡವು ಇಂದು ವಿಕಾಸ ಸೌಧದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (ಸಿಇಓ) ಮನೋಜ್ ಕುಮಾರ್ ಮೀನಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿತು. ಅಲ್ಲದೆ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಅವರ ಸಲಹೆ, ಅಭಿಪ್ರಾಯ ಮತ್ತು ದೂರುಗಳನ್ನು ಪಡೆಯಲು ಸಂವಾದ ನಡೆಸಲಿದೆ. ಇದರಲ್ಲಿ ವಿವಿಧ ಪ್ರಜಾಪ್ರಭುತ್ವ ರಾಷ್ಟçಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ. ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಿರುವ ಕುರಿತು ಚುನಾವಣಾ ಆಯೋಗವು ತಾ. ೧೦ ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದೆ. ಚುನಾವಣಾ ಆಯುಕ್ತರು ತಾ. ೧೧ ರಂದು ದೆಹಲಿಗೆ ಹಿಂತಿರುಗುವ ಮೊದಲು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧನ
ಕೊಚ್ಚಿ, ಮಾ. ೯: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸ ಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ. ವಯನಾಡು ಮೂಲದ ಶಫಿ ಎಂಬಾತನನ್ನು ೧೪೮೭ ಗ್ರಾಂ ಚಿನ್ನಾಭರಣದೊಂದಿಗೆ ಕೊಚ್ಚಿಯಲ್ಲಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ಪೊಲೀಸರು ಬಂಧಿಸಿದ್ದಾರೆ. ಬಹ್ರೇನ್-ಕೋಯಿಕ್ಕೋಡ್-ಕೊಚ್ಚಿ ಸೇವೆಯ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತ ಚಿನ್ನ ಕಳ್ಳ ಸಾಗಣೆ ಮಾಡುತ್ತಿರುವುದಾಗಿ ಗೌಪ್ಯ ಮಾಹಿತಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ಗೆ ಲಭಿಸಿತ್ತು. ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು ಅಂಗಿಯ ತೋಳನ್ನು ಮುಚ್ಚಿ ಹಸಿರು ಚಾನಲ್ ಮೂಲಕ ಹಾದುಹೋಗುವುದು ಆತನ ಗುರಿಯಾಗಿತ್ತು. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ, ಬುಧವಾರ ಚೆನ್ನೆöÊ ವಿಮಾನ ನಿಲ್ದಾಣದಲ್ಲಿ ೩.೩೨ ಕೋಟಿ ಮೌಲ್ಯದ ೬.೮ ಕೆ.ಜಿ. ತೂಕದ ಚಿನ್ನವನ್ನು ಸಾಗಿಸಲು ಯತ್ನಿಸುತ್ತಿದ್ದ ಸಿಂಗಾಪುರದಿAದ ಆಗಮಿಸಿದ ಇಬ್ಬರು ಪ್ರಯಾ ಣಿಕರನ್ನು ಬಂಧಿಸಲಾಗಿದೆ ಎಂದು ಚೆನ್ನೆöÊ ಕಸ್ಟಮ್ಸ್ ತಿಳಿಸಿದೆ. ಅಧಿಕಾರಿಗಳ ಪ್ರಕಾರ, ಪ್ರಯಾಣಿಕರು ಸಿಂಗಾಪುರದಿAದ ಂI-೩೪೭ ಮತ್ತು ೬ಇ-೫೨ ಮೂಲಕ ಚೆನ್ನೆöÊಗೆ ಬಂದಿದ್ದರು. ಚೆನ್ನೆöÊ ಕಸ್ಟಮ್ಸ್ ಈ ಕುರಿತು ಟ್ವೀಟ್ ಮಾಡಿದ್ದು, ಗುಪ್ತಚರ ಮಾಹಿತಿ ಆಧರಿಸಿ, ಸಿಂಗಾಪುರದಿAದ ಂI-೩೪೭ ಮತ್ತು ೬ಇ-೫೨ ಮೂಲಕ ಬಂದ ೨ ಪ್ರಯಾಣಿಕರನ್ನು ತಾ. ೭ ರಂದು ಕಸ್ಟಮ್ಸ್ ತಡೆಹಿಡಿದಿದೆ. ಅವರ ವಸ್ತುಗಳನ್ನು ಹುಡುಕಿದಾಗ, ರೂ. ೩.೩೨ ಕೋಟಿ ಮೌಲ್ಯದ ಒಟ್ಟು ೬.೮ ಕೆ.ಜಿ. ತೂಕದ ಚಿನ್ನವನ್ನು ವಶಪಡಿಸಿ ಕೊಳ್ಳಲಾಗಿದೆ. ಪ್ರಯಾಣಿಕರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.