ಸುಂಟಿಕೊಪ್ಪ, ಮಾ. ೯: ಸುಂಟಿಕೊಪ್ಪ ಜೆಸಿಐ ಸಂಸ್ಥೆಯ (ಜೂನಿಯರ್ ಛೇಂಬರ್ ಆಫ್ ಇಂಟರ್ ನ್ಯಾಷನಲ್ ) ೨೦೨೩ ನೇ ಸಾಲಿನ ಘಟಕದ ಅಧ್ಯಕ್ಷರಾಗಿ ಟಿ.ಜಿ. ಪ್ರೇಮಕುಮಾರ್ ಆಯ್ಕೆಯಾಗಿದ್ದಾರೆ.

ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಯಲ್ಲಿ ವಿಜ್ಞಾನ ಮತ್ತು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಖಜಾಂಚಿಯಾಗಿ ನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಕೆ. ಸತೀಶ್ ಕುಮಾರ್ ತಿಳಿಸಿದ್ದಾರೆ.