ಮಡಿಕೇರಿ, ಮಾ. ೧೦: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ, ದೂರವಾಣಿ ಸಂಖ್ಯೆ:೦೮೦-೩೫೨೫೪೭೫೭ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.