ಮಡಿಕೇರಿ, ಮಾ. ೧೧: ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿ ದರು. ಸುಮಾರು ರೂ. ೪.೯೦ ಲಕ್ಷ ವೆಚ್ಚದಲ್ಲಿ ನಗರಸಭಾ ನಿಧಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಮಡಿಕೇರಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ರೂ. ೪೦ ಕೋಟಿ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು. ನಗರಸಭಾ ನಿಧಿಯಿಂದ ರೂ. ೪.೯೦ ಲಕ್ಷ ವೆಚ್ಚದಲ್ಲಿ ಮಡಿಕೇರಿ ನಗರದ ಎಲ್ಲಾ ವಾರ್ಡ್ಗಳಲ್ಲಿ ನಾಮಫಲಕ ಅಳವಡಿಸಲಾಗುತ್ತಿದೆ, ೨೦೨೨-೨೩ನೇ ಸಾಲಿನ ೧೫ನೇ ಹಣಕಾಸು ಆಯೋಗದ ಅನುದಾನದಡಿ ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ಸುಮಾರು ರೂ. ೧೧.೮೪ ಲಕ್ಷ ವೆಚ್ಚದಲ್ಲಿ ಎಲ್ಇಡಿ ಬೀದಿದೀಪ ಅಳವಡಿಸಲಾಗುತ್ತಿದೆ, ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಿಕೇಂದ್ರಿಕೃತ ತ್ಯಾಜ್ಯಗೊಬ್ಬರ ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ ಆಗುವುದರೊಳಗೆ ಪೂರ್ಣಗೊಳ್ಳಲಿವೆ.
ನಗರ ಅಭಿವೃದ್ಧಿಗೆ ಸಂಬAಧಿಸಿ ದಂತೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಆಯಾಯ ವಾರ್ಡಿನ ಸದಸ್ಯರು, ಅಧಿಕಾರಿಗಳು ಕಾಮಗಾರಿಗೆ ಸಂಬAಧಿಸಿದAತೆ ಗಮನಹರಿಸಿದ್ದಾರೆ ಎಂದರು.
ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ನಗರಸಭೆ ಪೌರಾಯುಕ್ತ ವಿಜಯ್, ಪ್ರಾಂಶುಪಾಲ ವಿಜಯ್, ನಗರಸಭಾ ಸದಸ್ಯರು ಇತರರು ಇದ್ದರು.