ಮಡಿಕೇರಿ, ಮಾ. ೧೦: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಕೊಡಗು ಜಿಲ್ಲಾ ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡು ಈ ಸಂಬAಧ ಯುವಕನೋರ್ವನನ್ನು ಬಂಧಿಸಿದ್ದಾರೆ.

ಕುಶಾಲನಗರ ಗೌಡ ಸಮಾಜದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಸುಳಿವರಿತ ಕುಶಾಲನಗರ ಪೊಲೀಸರು ದಾಳಿ ಮಾಡಿ ಗಾಂಜಾ ಸಾಗಾಟ ಮಾಡುತ್ತಿದ್ದ ಪಿರಿಯಾಪಟ್ಟಣ ಗ್ರಾಮದ ಸುಂಕದಹಳ್ಳಿ ಗ್ರಾಮದ ನಿಶಾಂತ್ ಎಸ್.ಜಿ. (೨೦) ಎಂಬಾತನನ್ನು ಬಂಧಿಸಿ ಆತನ ಬಳಿ ಇದ್ದ ೧೭೦ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನಿರ್ದೇಶನದಂತೆ ಸೋಮವಾರಪೇಟೆ ಡಿ.ವೈ.ಎಸ್ಪಿ. ಆರ್.ವಿ. ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಶ್ರೀಕಾಂತ್, ಠಾಣಾಧಿಕಾರಿ ಲೋಹಿತ್, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಯುವಕ - ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳನ್ನು ಕಂಡುಬAದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ಕೋರಿದೆ.