ಮಡಿಕೇರಿ, ಮಾ. ೧೦ : ಕರವಲೆ ಬಾಡಗದಲ್ಲಿರುವ ಅಲ್ಲಾರಂಡ ರಂಗ ಚಾವಡಿ ವತಿಯಿಂದ ತಾ.೨೩ರಂದು ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಿಗ್ಗೆ ೧೦.೩೦ಗಂಟೆಗೆ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಶ್ ಉದ್ಘಾಟಿಸುವರು. ರಂಗಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯೆ ರಾಧಾ ಕೊಡಗು, ರಂಗ ಕಲಾವಿದರಾದ ಉಳ್ಳಿಯಡ ಡಾಟಿ ಪೂವಯ್ಯ, ಪಟ್ಟಡ ಧನು, ರಂಗಕರ್ಮಿ ಬಾಲಾಜಿ ಕಶ್ಯಪ್ ಉಪಸ್ಥಿತರಿರುವರು.
ಇದೇ ಸಂದರ್ಭ ಮಾದೇಟಿರ ಬೆಳ್ಯಪ್ಪ ರಚಿಸಿ ನಿರ್ದೇಶಿಸಿರುವ ಕಣಿವೆಯ ನೆಳಲಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ.