ಪೊನ್ನಂಪೇಟೆ, ಮಾ. ೧೦: ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿ.ಐ.ಟಿ. ಕಾಲೇಜಿನಲ್ಲಿ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಯಮುನ ಅಶೋಕ್ ಚಂಗಪ್ಪ ಪಾಲ್ಗೊಂಡಿದ್ದರು.
ಸ್ತಿçÃ-ಪುರುಷರಿಬ್ಬರು ಸಮಾನರು. ಆಡು ಮುಟ್ಟದ ಸೊಪ್ಪಿಲ್ಲ, ಸ್ತಿçà ಪ್ರವೇಶಿಸದ ಕ್ಷೇತ್ರವಿಲ್ಲ ಎಂಬ ಮಾತಿನಂತೆ ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ, ವೈಜ್ಞಾನಿಕ, ವೈಮಾನಿಕ, ಬಾಹ್ಯಾಕಾಶ ಹೀಗೆ ಹಲವಾರು ಕ್ಷೇತ್ರದಲ್ಲಿ ಸ್ತಿçÃ-ಪುರುಷರಿಗೆ ಸರಿಸಮಾನವಾಗಿ ತನ್ನ ಅಸ್ತಿತ್ವವನ್ನು ಸ್ಥಾಪಿಸಿದ್ದಾರೆ ಎಂದು ತಿಳಿಸಿದರು. ಮಹಿಳಾ ಸಾಧಕಿಯರ ವಿಚಾರಧಾರೆಯನ್ನು ತಿಳಿಸಿದರು.
ಸಿ.ಐ.ಟಿ. ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜು ಮಹಿಳೆಯರ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ರೋಹಿಣಿ ತಿಮ್ಮಯ್ಯ ಮತ್ತು ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಐ.ಕೆ. ಯಮುನ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿ.ಐ.ಟಿ. ಪ್ರಾಧ್ಯಾಪಕವೃಂದ, ಬೋಧಕೇತರ ವೃಂದ, ವಿದ್ಯಾರ್ಥಿ ವೃಂದ ಪಾಲ್ಗೊಂಡಿದ್ದರು.