ಮಡಿಕೇರಿ, ಮಾ. ೧೧: ರಾಷ್ಟಿçÃಯ ಜಂತುಹುಳು ನಿಯಂತ್ರಣ ಕಾರ್ಯಕ್ರಮ ಜಿಲ್ಲೆಯಲ್ಲಿ ತಾ. ೧೩ ರಂದು ನಡೆಯಲಿದ್ದು, ೧ ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಆಲ್ಬೆಂಡ್ಜೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಮಾಹಿತಿ ನೀಡಿ, ದೇಶದಾದ್ಯಂತ ತಾ. ೧೩ ರಂದು “ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮ” (ಎನ್ಡಿಡಿ) ಜರುಗಲಿದೆ. ಹಾಗೆಯೇ ತಾ. ೧೪ ರಿಂದ ೨೫ ರವರೆಗೆ ಮೋಪ್ ಅಪ್ ಡೇ (ಒoಠಿ uಠಿ ಜಚಿಥಿ) ಕಾರ್ಯಕ್ರಮ ನಡೆಯುತ್ತಿದ್ದು, ೧-೧೯ ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್ಬೆಂಡಜೋಲ್-೪೦೦ ಎಂ.ಜಿ. ಮಾತ್ರೆ ನೀಡಲಾಗುತ್ತದೆ ಎಂದು ತಿಳಿಸಿದರು.
ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ.
೬-೧೯ ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ.
ಆಶಾ ಕಾರ್ಯಕರ್ತೆಯರು ೬-೧೯ ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ೧-೨ ವರ್ಷದ ಮಕ್ಕಳಿಗೆ ಅರ್ಧ ಆಲ್ಬೆಂಡಜೋಲ್ ಮಾತ್ರೆ ಹಾಗೂ ೨-೧೯ ವರ್ಷದ ಮಕ್ಕಳಿಗೆ ಒಂದು ಆಲ್ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಕೋರಿದರು. ಆರ್ಸಿಹೆಚ್ ಅಧಿಕಾರಿ ಡಾ. ಗೋಪಿನಾಥ್ ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ (ಎನ್ಡಿಡಿ) ಕೊಡಗು ಜಿಲ್ಲೆಯಲ್ಲಿ ೧-೧೯ ವರ್ಷದೊಳಗಿನ ಮಕ್ಕಳ ಗುರಿ ೧,೪೭,೦೩೯ ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು ೨೯,೪೯೯, ಅಂಗನವಾಡಿಯಿAದ ಹೊರಗುಳಿದ ಮಕ್ಕಳು ೭,೫೬೫, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೯೨,೮೭೩ ಹಾಗೂ ಪದವಿಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೧೫,೭೫೭ ಹಾಗೆಯೇ ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೧,೩೪೫ ಮಾತ್ರೆ ವಿತರಿಸಲಾಗುತ್ತದೆ ಎಂದರು.
ಎನ್ಡಿಡಿ ಕಾರ್ಯಕ್ರಮಕ್ಕೆ ಅವಶ್ಯ ಕತೆಯಿರುವ ಆಲ್ಬೆಂಡಜೋಲ್ ೪೦೦ ಎಂ.ಜಿ. ಮಾತ್ರೆಗಳನ್ನು ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಅನುಷ್ಠಾನ ಗೊಳಿಸಲು ಎಲ್ಲಾ ಶಾಲೆ/ ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್ಡಿಡಿ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಲಾಗಿದೆ ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.