ಗೋಣಿಕೊಪ್ಪಲು, ಮಾ. ೧೧: ಕೆಪಿಸಿಸಿ ಕಾರ್ಯಾಧ್ಯಕ್ಷ ಮಾಜಿ ಸಂಸದ ಆರ್. ಧ್ರುವನಾರಾಯಣ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಸಂತಾಪ ಸಭೆ ವೀರಾಜಪೇಟೆಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷವನ್ನು ಉತ್ತಮ ಸಂಘಟನೆಯತ್ತ ಕೊಂಡೊಯ್ದಿದ್ದರು. ಕೊಡಗಿಗೆ ಹಲವು ಬಾರಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದರು. ಇಂದು ಇವರನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದರು. ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಮಾತನಾಡಿ, ಆರ್. ಧ್ರುವನಾರಾಯಣರವರೊಂದಿಗೆ ಉತ್ತಮ ಒಡನಾಟವಿತ್ತು. ಕೆಲವೇ ವಾರಗಳ ಹಿಂದೆ ಮನೆಗೆ ಆಗಮಿಸಿ ತೆರಳಿದ್ದರು. ಇಂದು ಇವರನ್ನು ಕಳೆದುಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಸಜ್ಜನ ರಾಜಕಾರಣಿಯಾಗಿ ಎಲ್ಲರೊಂದಿಗೂ ಮುಕ್ತವಾಗಿ ಬೆರೆಯುತ್ತಿದ್ದರು ಎಂದು ಸ್ಮರಿಸಿದರು.
ಸಂತಾಪ ಸಭೆಯಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ರಂಜಿ ಪೂಣಚ್ಚ, ಡಿಸಿಸಿ ಸದಸ್ಯ ಪೆಮ್ಮಂಡ ಪೊನ್ನಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಳೆರ ಭಾರತಿ, ಕಾರ್ಯದರ್ಶಿ ಕರ್ತಮಾಡ ರಮ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಫಾರುಕ್, ಕಾಂಗ್ರೆಸ್ ಮುಖಂಡರಾದ ಮತೀನ್, ಗೋಪಾಲಕೃಷ್ಣ, ನರೇಂದ್ರ ಕಾಮತ್, ಜಿ.ಪಂ. ಮಾಜಿ ಸದಸ್ಯ ಹೆಚ್.ಕೆ. ಸಣ್ಣಯ್ಯ, ಲೀಲಾವತಿ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಕೊಡ್ಲಿಪೇಟೆ: ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ನಿಧನಕ್ಕೆ ಕೊಡ್ಲಿಪೇಟೆ ಹೋಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಇಲ್ಲಿನ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂತಾಪ ಸೂಚಿಸಲಾಯಿತು. ಈ ಸಂದರ್ಭ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಔರಂಗಜೇಬ್, ಕೆ.ಆರ್. ಚಂದ್ರಶೇಖರ್, ಸದಸ್ಯರಾದ ಪ್ರಸನ್ನ, ಪ್ರಮುಖರಾದ ಶಿವರಳ್ಳಿ ಮೇದಪ್ಪ, ಹರೀಶ್ ನೀರುಗುಂದ, ವೀರಭದ್ರ, ಶರು, ಪುನೀತ್, ಮಂಜು, ಮಹೇಂದ್ರ, ತೌಹೀದ್ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.
ಮಡಿಕೇರಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಶಾಸಕ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ವ್ಯಕ್ತಪಡಿಸಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್ ಅವರ ನೇತೃತ್ವದಲ್ಲಿ ನಡೆದ ಸಂತಾಪ ಸಭೆಯಲ್ಲಿ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆಯ ಮೂಲಕ ಶಾಂತಿ ಕೋರಿದರು.
ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ. ಹಂಸ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ರಾಜೇಶ್ ಹಿರಿಯ ನಾಯಕ ಧ್ರುವನಾರಾಯಣ ಅವರ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ, ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಟಿ.ಹೆಚ್. ಉದಯಕುಮಾರ್, ಪ್ರಕಾಶ್ ಆಚಾರ್ಯ, ಜಗದೀಶ್, ಮುದ್ದು ರಾಜು, ಕೆ.ಜಿ. ಪೀಟರ್, ಪ್ರೇಮ ಕೃಷ್ಣಪ್ಪ, ಕೆ.ಆರ್. ದಿನೇಶ್, ಕಲೀಲ್ ಬಾಷಾ, ಎಂ.ಇ. ಫಾರೂಖ್, ರಿಯಾಬುದ್ದೀನ್, ಆರ್.ಪಿ. ಚಂದ್ರಶೇಖರ್, ಎಂ.ಎನ್. ರವೂಫ್, ಎಂ.ಜಿ. ನಾಗೇಶ್, ಪುಷ್ಪ ಪೂಣಚ್ಚ, ಸದಾ ಮುದ್ದಪ್ಪ, ದೋಲ್ಪಾಡಿ ಯಶೋಧರ್, ಹೆಚ್.ಇ. ಸನಾವುದ್ದೀನ್, ಸಂಶುವುದ್ದೀನ್, ಎಂ.ಎA. ಹನೀಫ್, ನಾಗೇಶ್, ರಾಣಿ, ಉಷಾ, ದಿವ್ಯ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಉಪಸ್ಥಿತರಿದ್ದರು.
ಚೆಟ್ಟಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕಸಭಾ ಮಾಜಿ ಸದಸ್ಯ ಆರ್. ಧ್ರ್ರುವನಾರಾಯಣ ಅವರ ನಿಧನಕ್ಕೆ ಕುಶಾಲನಗರ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂತಾಪ ಸಭೆಯಲ್ಲಿ ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್, ಪ್ರಮುಖರಾದ ಕುಟ್ಟಂಡ ಪ್ರಮೋದ್, ಸುನಿತಾ ಮಂಜುನಾಥ್, ಪಪ್ಪು ತಿಮ್ಮಯ್ಯ, ಮಂಜುನಾಥ್ ಗುಂಡೂರಾವ್, ಶಾಜಿ, ಸಲೀಮ್, ತೀರ್ಥ ಕುಮಾರ್, ಝುಬೇರ್, ರಫಿ, ರಝಾಕ್ ಮತ್ತು ಇನ್ನಿತರರು ಭಾಗವಹಿಸಿದ್ದರು.