ನಾಪೋಕ್ಲು, ಮಾ. ೧೧: ಪೆರಾಜೆ ಗ್ರಾಮದ ಕುಂಬಳಚೇರಿಯ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ವಯನಾಟ್ ಕುಲವನ್ ದೈವ ಕಟ್ಟು ಮಹೋತ್ಸವ ಮೂರು ದಿನಗಳ ಕಾಲ ಅದ್ಧೂರಿಯಿಂದ ನಡೆಯಿತು. ೩೦೦ ವರ್ಷಗಳ ನಂತರ ೫೦ ಲಕ್ಷ ರೂ. ವೆಚ್ಚದಲ್ಲಿ ಅದ್ಧೂರಿ ಮಹೋತ್ಸವ ನಡೆದಿದ್ದು ಸಾವಿರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ಪೆರಾಜೆಯ ಶ್ರೀ ಶಾಸ್ತಾವು ದೇವಸ್ಥಾನದಿಂದ ಹಸಿರು ವಾಣಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಶ್ರೀ ಕಾರ್ನೋನ್ ದೈವ, ಶ್ರೀ ಕೋರಚ್ಚನ್ ದೈವ, ಶ್ರೀ ಕಂಡನಾರ್ ಕೇಳನ್ ದೈವ, ಶ್ರೀ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶ ಮತ್ತು ಸೂಟೆ ಸಮರ್ಪಣೆ ನಡೆಯಿತು. ನಂತರ ಶ್ರೀ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ ನಡೆಯಿತು.
ಈ ಸಂದರ್ಭ ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಕೊಳಂಗಾಯ, ನೀಲೇಶ್ವರ ಕ್ಷೇತ್ರದ ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ, ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ವಯನಾಟ್ ಕುಲವನ್ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ, ತಂಬುರಾಟಿ ಭಗವತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕುಂಞಕಣ್ಣ ಬೇಡಗಂ, ತೊಡಿಕಾನದ ಶ್ರೀಮಲ್ಲಿಕಾರ್ಜುನ ದೇವಾಲಯದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಿವಾಕರ ರೈ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಆಧಿಕಾರಿಗಳು, ಊರಿನ ಪರ ವೂರಿನ ಭಕ್ತಾದಿಗಳು, ಪಾಲ್ಗೊಂಡಿದ್ದರು. - ದುಗ್ಗಳ ಸದಾನಂದ.