ನಾಪೋಕ್ಲು, ಮಾ. ೧೧: ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂರ್ರಾಷ್ಟಿçÃಯ ಮಹಿಳಾ ದಿನಾ ಚರಣೆಯ ಪ್ರಯುಕ್ತ ಸಮಾಜಮುಖಿ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ, ವಿವಿಧ ರೀತಿಯಲ್ಲಿ ಸಾಧನೆ ಮಾಡಿರುವ ಮಹಿಳೆ ಯರನ್ನು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಯಿತು.
ಸಮೀಪದ ಹೊದ್ದೂರು ಗ್ರಾಮದ ಕಬಡಕೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ತಂಸೀನಾ ಬಾನು ಅವರು ಕೂಡ ಸನ್ಮಾನ ಸ್ವೀಕರಿಸಿದರು. ಅಂಗನವಾಡಿ ಕೇಂದ್ರದ ನಿರ್ವಹಣೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಲಾಖೆಯಿಂದ ಸಿಗುವ ಸೌಲಭ್ಯ, ಮಾದರಿ ಶಿಕ್ಷಣ ಭೋದನೆಯಲ್ಲಿನ ಮುತುವರ್ಜಿ, ಮಾತೃವಂದನಾ -ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿನ ನಿರಂತರ ಪ್ರಯತ್ನ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ತೆಗೆದುಕೊಂಡಿರುವ ಕ್ರಮಗಳನ್ನು ಗುರುತಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಾರಾಷ್ಟೀಯ ಮಹಿಳಾ ದಿನಾಚರಣೆಯ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಗೆ ನೀಡುವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.