ಮಡಿಕೇರಿ, ಮಾ. ೧೧: ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ-೧ ಕ್ಕೆ ಸೇರಿದ ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹ ವಸತಿ ರಹಿತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೧೫ ಕೊನೆ ದಿನವಾಗಿದೆ. ಸಂಬAಧಿಸಿದ ಅರ್ಜಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು. ವಸತಿ ಸೌಲಭ್ಯದ ಫಲಾಪೇಕ್ಷಿಗಳು ಅಲೆಮಾರಿ/ ಅರೆಅಲೆಮಾರಿ ಸಮುದಾಯ ದವರೆಂದು ಗುರುತಿಸಿ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
ಅರ್ಜಿದಾರರು ಈ ಹಿಂದೆ ಯಾವುದೇ ಯೋಜನೆಗಳಲ್ಲಿ/ ವಿವಿಧ ಇಲಾಖೆಗಳು/ ನಿಗಮಗಳಿಂದ ವಸತಿ ಸೌಲಭ್ಯವನ್ನು ಪಡೆದಿರಕೂಡದು. ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಅರ್ಜಿದಾರರಾದ ಮಹಿಳೆ/ ಪುರುಷರ ಹೆಸರಿನಲ್ಲಿ ನೋಂದಣಿಯಾಗಿರಬೇಕು. ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.೨ ಲಕ್ಷಗಳ ಮಿತಿಯೊಳಗಿರಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮಡಿಕೇರಿ ದೂ.ಸಂ. ೦೮೨೭೨-೨೯೫೬೨೮, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮೊ.ಸಂ. ೮೭೬೨೪೭೬೭೯೦, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವೀರಾಜಪೇಟೆ ಮೊ.ಸಂಖ್ಯೆ. ೯೮೪೪೫೩೧೦೪೦, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲೂಕು ಮೊ.ಸಂಖ್ಯೆ. ೯೪೮೧೭೭೨೧೪೩ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.