ಮೈಸೂರು, ಮಾ. ೧೧: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿಯಾಗಿದ್ದ ಸಜ್ಜನ ರಾಜಕಾರಣಿ ಆರ್. ಧ್ರುವನಾರಾಯಣ (೬೧) ಅವರು ತಾ. ೧೧ ರಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಮೈಸೂರಿನಲ್ಲಿದ್ದ ಧ್ರುವನಾರಾಯಣ ಅವರಿಗೆ ಮುಂಜಾನೆ ಸುಮಾರು ೬.೩೦ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಆಸ್ಪತ್ರೆಗೆ ಆಗಮಿಸಿದ್ದಾಗಲೇ ಅವರು ಕೋಮಾ ಸ್ಥಿತಿಗೆ ಹೋಗಿದ್ದಾರೆ. ಹೊಟ್ಟೆಹುಣ್ಣು ಒಡೆದು ಆಂತರಿಕ ತೀವ್ರ ರಕ್ತಸ್ರಾವದಿಂದಾದ ಹೃದಯ ಮತ್ತು ಶ್ವಾಸಕೋಶ ಸ್ತಂಭನದಿAದ ಕೆಪಿಪಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮೃತಪಟ್ಟರು ಎಂದು ಅವರಿಗೆ ಪ್ರಥಮ ಹಂತದ ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿ ವಾಪಸಾಗಿದ್ದ ಧ್ರುವನಾರಾಯಣ ಮನೆಯ ಮೇಲಿನ ಮಹಡಿಯಿಂದ ಕಾರು ಚಾಲಕನನ್ನು ಕರೆದಿದ್ದರು. ಚಾಲಕ ತೆರಳಿ ನೋಡುವಷ್ಟರಲ್ಲಿ ವಾಂತಿ, ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ.

ಇಂದು ಅಂತ್ಯಕ್ರಿಯೆ

ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ತಾಲೂಕಿನ ಹೆಗ್ಗವಾಡಿಯಲ್ಲಿಟಿ ಅವರ ಜಮೀನಿನಲ್ಲಿ, ತಂದೆ ತಾಯಿ ಸಮಾಧಿ ಪಕ್ಕದಲ್ಲಿ, ಅಂತ್ಯಸAಸ್ಕಾರ ನೆರವೇರಲಿದೆ.

ನಿಧನಕ್ಕೆ ರಾಜಕೀಯ ರಹಿತವಾಗಿ ಕಂಬನಿ ವ್ಯಕ್ತವಾಗಿದೆ. ವಿವಿಧ ಪಕ್ಷಗಳ ನಾಯಕರುಗಳು ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

(ಮೊದಲ ಪುಟದಿಂದ)

ಸAತಾಪ : ಧ್ರುವನಾರಾಯಣ ನಿಧನಕ್ಕೆ ಮಾಜಿ ಸಚಿವ ಎಂ.ಸಿ. ನಾಣಯ್ಯ, ಕೊಡಗು ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷೆ ತಾರಾ ಅಯ್ಯಮ್ಮ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ. ಕಲೀಲ್ ಬಾಷಾ, ಅಲ್ಪಸಂಖ್ಯಾತ ಘಟಕದ ಮುಖಂಡ ಕೆ.ಎ. ಯಾಕೂಬ್ ಅವರುಗಳು ಸಂತಾಪ ಸೂಚಿಸಿದ್ದಾರೆ.