ಮಡಿಕೇರಿ, ಮಾ. ೧೨: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೧೩ ರಂದು (ಇಂದು) ಸಂಜೆ ೪ ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತ ಶಯನ, ಪೂಮಾಲೆ ವಾರಪತ್ರಿಕೆ ಸಂಪಾದಕ ಮಹೇಶ್ ನಾಚಯ್ಯ, ವಿಜಯ ಕರ್ನಾಟಕ ಛಾಯಗ್ರಾಹಕ ನಾಗೇಶ್ ಪಾಣತ್ತಲೆ ಇವರುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.