ಪೊನ್ನಂಪೇಟೆ, ಮಾ. ೧೨: ಪೊನ್ನಂಪೇಟೆಯ ಬಸ್ ನಿಲ್ದಾಣದ ಸಮೀಪ ಇರುವ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಹಿರಿಯ ಛಾಯಾಗ್ರಾಹಕ ಎಸ್.ಎಲ್. ಶಿವಣ್ಣ ಎಂಬವರ ಅಂಗಡಿಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ರೂ.೨೪ ಸಾವಿರ ಮೌಲ್ಯದ ಸಿಗರೇಟ್ ಪ್ಯಾಕೆಟ್ಗಳು ರೂ.೫ ಸಾವಿರ ನಗದು ಹಾಗೂ ೨೦ ಪ್ಯಾಕೆಟ್ ದೀಪದ ಎಣ್ಣೆ ಹಾಗೂ ಅಡುಗೆ ಎಣ್ಣೆ ಪ್ಯಾಕೆಟ್ಗಳನ್ನು ಕಳ್ಳತನ ಮಾಡಿದ್ದಾರೆ.
ಇಂದು ಬೆಳಗಿನ ಜಾವ ಸುಮಾರು ೫ ಗಂಟೆ ಸಮಯದಲ್ಲಿ ಅಂಗಡಿ ಬಾಗಿಲು ತೆಗೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.