ಮಡಿಕೇರಿ, ಮಾ. ೧೧ : ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಜಯ ಸಂಕಲ್ಪ ರಥಯಾತ್ರೆ ಮಡಿಕೇರಿಯಲ್ಲಿ ಸಾಗಿತು.
ರಥಯಾತ್ರೆಯ ನೇತೃತ್ವ ವಹಿಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸುಜಾ ಕುಶಾಲಪ್ಪ ಮತ್ತು ಇತರ ನಾಯಕರುಗಳು ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯಕ್ಕೆ ತೆರಳಿ ಅಲ್ಲಿಯೂ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಬಿಜೆಪಿ ಧ್ವಜಗಳನ್ನು ಹಿಡಿದ ಕಾರ್ಯಕರ್ತರು ಮುಂದೆ ಸಾಗಿದರೆ, ನಾಯಕರುಗಳಿದ್ದ ರಥ ಜೊತೆಯಲ್ಲಿ ಸಾಗಿತು. ಮಹದೇವಪೇಟೆ, ಇಂದಿರಾಗಾAಧಿ ವೃತ್ತ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕಾಗಿ ಸಾಗಿ, ಮೇ.ಮಂಗೇರಿರ ವೃತ್ತವನ್ನು ಹಾದು ಜ.ತಿಮ್ಮಯ್ಯ ವೃತ್ತದಲ್ಲಿ ಸಮಾಗಮಗೊಂಡಿತು.
ನಗರದ ಪ್ರಮುಖ ರಸ್ತೆಯುದ್ದಕ್ಕೂ ಬಿಜೆಪಿ ಪಕ್ಷದ ಬಂಟಿAಗ್ಸ್ ಹಾಗೂ ಬಾವುಟಗಳಿಂದ ಸಿಂಗರಿಸಲಾಗಿತ್ತು. ಪಕ್ಷದ ನಾಯಕರುಗಳ ಕಟೌಟ್ಗಳು ಫ್ಲೆಕ್ಸ್ಗಳು ರಾರಾಜಿಸುತ್ತಿದ್ದವು.
ರಾಜನೀತಿಯಡಿ ಕೆಲಸ-ಡಿ.ವಿ.ಎಸ್.
ಬಿಜೆಪಿ ಸರಕಾರ ಬಂದ ಬಳಿಕ ಕೊಡಗು ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ಹೊಸ ಪರಿವರ್ತನೆಗೆ ಪ್ರಯತ್ನಿಸಲಾಗಿದೆ. ದೇಶ ಕಾಯುವ ಯೋಧರ ಋಣ ತೀರಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಬಿಜೆಪಿ ಜನಾಶೀರ್ವಾದದೊಂದಿಗೆ ವಿಶ್ವಾಸದ ರಾಜಕಾರಣ ಮಾಡುತ್ತಿದೆ. ಕೇವಲ ಪ್ರಚಾರದ ಫಲಕ ಹಾಕಿಕೊಳ್ಳುವದಲ್ಲ, ರಾಜನೀತಿಯಡಿ ಕೆಲಸ ಮಾಡುತ್ತಿದೆ ಎಂದು ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.
ರಥಯಾತ್ರೆಯಲ್ಲಿ ಪಾಲ್ಗೊಂಡು ಜ.ತಿಮ್ಮಯ್ಯ ವೃತ್ತದಲ್ಲಿ ಮಾತನಾಡಿದ ಅವರು; ನಾಡಿನ ಜನತೆ ಬಿಜೆಪಿ ಮೇಲೆ ವಿಶ್ವಾಸ ಇರಿಸಿದ್ದಾರೆ. ಯಾವದೇ ನಂಬಿಕೆ ದ್ರೋಹ ಬಗೆದಿಲ್ಲ, ಕೊಡಗು ಜಿಲ್ಲೆಗೆ ವಿಶೇಷ ಅನುದಾನ ನೀಡಿದ್ದು, ಮತ್ತೊಮ್ಮೆ ಜನರ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ನಾಯಕರೇ ಇಲ್ಲದ ಕಾಂಗ್ರೆಸ್-ಈಶ್ವರಪ್ಪ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ; ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರುಗಳು ಅತಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಶಾಸಕರುಗಳಾಗಿದ್ದಾರೆ. ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಾಗ ಸಾಮರ್ಥ್ಯ ನೋಡಬೇಕಾಗುತ್ತದೆ. ಸುಮ್ಮನೆ ಹಾಕುವದಲ್ಲ, ಕಾಂಗ್ರೆಸ್ ಪಕ್ಷದಲ್ಲಿ ನಾಯಕರುಗಳೇ ಇಲ್ಲ. ರಾಹುಲ್ ಗಾಂಧಿ ಮಾತುಗಳಿಂದಾಗಿ ಪಕ್ಷ ಸೋಲುತ್ತಿದೆ. ಠೇವಣಿ ಇಲ್ಲದ ಪಕ್ಷ ಎಂದು ಹೇಳಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್
(ಮೊದಲ ಪುಟದಿಂದ) ಅವರುಗಳು ಎಂತಹ ನಾಯಕರುಗಳೆಂದು ಜನರೇ ಟೀಕೆ ಮಾಡುತ್ತಿದ್ದಾರೆ. ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಜಾತಿ ಆಧಾರದಲ್ಲಿ ಮತ ಕೇಳುತ್ತಿದ್ದಾರೆ. ರಾಜ್ಯಕ್ಕೆ ರಾಷ್ಟಿçÃಯವಾದಿಗಳು ಮುಖ್ಯಮಂತ್ರಿಯಾಗಬೇಕು. ಹೋರಾಟಗಾರರ ಜಿಲ್ಲೆ ಕೊಡಗು ಮತ್ತೆ ಬಿಜೆಪಿಯನ್ನು ಗೆಲ್ಲಿಸಲಿದೆ. ರಾಜ್ಯದಲ್ಲಿ ೧೫೦ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರುಗಳಾದ ಸುಜಾ ಕುಶಾಲಪ್ಪ, ಪ್ರತಾಪ್ ಸಿಂಹ ನಾಯಕ್, ವಿಜಯಸಂಕಲ್ಪ ಯಾತ್ರೆ ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರಿ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಮಡಿಕೇರಿ ನಗರ ಸಭಾಧ್ಯಕ್ಷೆ ಅನಿತಾ ಪೂವಯ್ಯ, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕರ್ನಾಟಕ ಪಶ್ಚ್ಚಿಮ ಘಟ್ಟ ಸಂರಕ್ಷಣಾ ಪಡೆ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಳಿಕ ಯಾತ್ರೆಯು ದಕ್ಷಿಣ ಕನ್ನಡ ಜಿಲ್ಲೆಯ ಕಡೆಗೆ ಪಯಣಿಸಿತು.