ಮಡಿಕೇರಿ, ಮಾ. ೧೧: ಕೊಡಗು ಜಿಲ್ಲಾ ಪಂಚಾಯಿತಿ, ವೀರಾಜಪೇಟೆ ತಾಲೂಕು ಪಂಚಾಯಿತಿ, ನಿಟ್ಟೂರು ಗ್ರಾಮ ಪಂಚಾಯಿತಿ ಮತ್ತು ನಿಟ್ಟೂರು ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವತಿಯಿಂದ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೪ ಸ್ತಿçÃಶಕ್ತಿ ಸಂಘಗಳ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ ಮಾರಾಟ ಮೇಳವು ನಿಟ್ಟೂರು ಗ್ರಾಮದ ಮೇಚಂಡ ಕಿಶ ಮಾಚಯ್ಯ ಅವರ ಗದ್ದೆಯಲ್ಲಿ ಏರ್ಪಾಡು ಮಾಡಲಾಗಿತ್ತು.

ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಟಿಮಾಡ ಶರೀನ್ ಮುತ್ತಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ದೇಶದ ಆರ್ಥಿಕ ವ್ಯವಸ್ಥೆಗೆ ಶಕ್ತಿ ತಂಬುಲು ಕರೆ ನೀಡಿದರು. ನಿಟ್ಟೂರು ಗ್ರಾಮ ಪಂಚಾಯಿತಿ ಸದಸ್ಯೆ ಪಡಿಞರಂಡ ಕವಿತಾ ಪ್ರಭು ಕುಮಾರ್ ವಿವಿಧ ಮಳಿಗೆಗಳನ್ನು ಗ್ರಾಮದ ಮಹಿಳಾ ಸಂಘಟನೆಗಳ ಮಹಿಳೆಯರು ಅಚ್ಚುಕಟ್ಟಾಗಿ ಜೋಡಿಸಿ ತಾವು ಕೈ ತೋಟದಲ್ಲಿ ಬೆಳೆದ ತರಕಾರಿ ಮತ್ತು ತಾವೇ ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ ಮಾರಾಟಕ್ಕೆ ಇಟ್ಟಿರುವುದು ಹೆಮ್ಮೆ ವಿಷಯ ಎಂದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂತೆಗೆ ಬಂದು ಸಹಕರಿಸ ಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳಾ ಸಂಘಗಳಿಗೆ ಪ್ರೋತ್ಸಾಹ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಚಕ್ಕೇರ ಸೂರ್ಯ ಅಯ್ಯಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನಮೋಹನ್, ತಾಲೂಕು ಓಖಒಐ ಸಂಜೀವಿನಿ ಒಕ್ಕೂಟದ ಸಂಯೋಜಕ ಯೋಗೇಶ್, ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಗ್ರಾಮ ಸಂಯೋಜಕಿ ಭವ್ಯ, ಒಕ್ಕೂಟದ ಅಧ್ಯಕ್ಷೆ ಕವಿತಾ ಲೋಕನಾಥ್, ಕಾರ್ಯದರ್ಶಿ ಸುಮಿ ರಾಜನ್ ಮತು ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತೆಯರು ಹಾಜರಿದ್ದರು.