ಕೂಡಿಗೆ, ಮಾ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ಶ್ರೀ ಹರಕೆ ಚೌಡೇಶ್ವರಿ ದೇವಿ ಮತ್ತು ನಾಗದೇವರ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮವು ತಾ. ೧೭ ರಂದು ನಡೆಯಲಿದೆ.

ಅದರ ಅಂಗವಾಗಿ ಗಣಪತಿ ಹೋಮ, ದುರ್ಗಾಹೋಮ, ಕಲಾವೃದ್ಧಿ ಹೋಮ , ಅಭಿಷೇಕ, ಕಳಸ ಪ್ರತಿಷ್ಠೆ ಹಾಗೂ ದೇವಿಗೆ ವಿವಿಧ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಸಂಜೆ ಕ್ಷೇತ್ರದ ಆವರಣದಲ್ಲಿ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಮತ್ತು ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮವು ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಸಿ. ರವಿ ತಿಳಿಸಿದ್ದಾರೆ.