ಕೂಡಿಗೆ, ಮಾ. ೧೧: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಕೋಟೆ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆಯನ್ನು ಜೆಡಿಎಸ್ ಪ್ರಮುಖ ನಾಪಂಡ ಮುತ್ತಪ್ಪ ನೆರವೇರಿಸಿದರು.
ನಂತರ ಮಾತನಾಡಿ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಹೈನುಗಾರಿಕೆ ಸಹಕಾರಿಯಾಗುತ್ತದೆ. ಹೈನುಗಾರಿಕೆ ಯಿಂದ ಬಡ ಕುಟುಂಬಗಳು ನೆಮ್ಮದಿಯಾಗಿ ಜೀವನ ಸಾಗಿಸಲು ಸಾಧ್ಯ. ಈಗಾಗಲೇ ಪ್ರತಿ ಕೂಡಿಗೆ, ಮಾ. ೧೧: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಕೋಟೆ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆಯನ್ನು ಜೆಡಿಎಸ್ ಪ್ರಮುಖ ನಾಪಂಡ ಮುತ್ತಪ್ಪ ನೆರವೇರಿಸಿದರು.
ನಂತರ ಮಾತನಾಡಿ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಹೈನುಗಾರಿಕೆ ಸಹಕಾರಿಯಾಗುತ್ತದೆ. ಹೈನುಗಾರಿಕೆ ಯಿಂದ ಬಡ ಕುಟುಂಬಗಳು ನೆಮ್ಮದಿಯಾಗಿ ಜೀವನ ಸಾಗಿಸಲು ಸಾಧ್ಯ. ಈಗಾಗಲೇ ಪ್ರತಿ ಮಾಡಿದಲ್ಲಿ ಜನರಿಗೆ ಇನ್ನಷ್ಟು ಉತ್ತೇಜನ ನೀಡಿದಂತೆ ಆಗುವುದು ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿವಿಲ್ ಇಂಜಿನಿಯರ್ ಆರ್.ಆರ್. ಕುಮಾರ್ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಈಗಾಗಲೇ ಹೈನುಗಾರಿಕೆ ಹೆಚ್ಚು ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಇಂತಹ ಸಂಘಗಳ ಮೂಲಕ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗುತ್ತದೆ ಎಂದರು.
ಶಿರAಗಾಲ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಂದ್ರಶೇಖರ್, ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ರಮೇಶ್, ಹೆಬ್ಬಾಲೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಧುಸೂಧನ್, ಹಾಲು ಉತ್ಪಾದಕರ ಮಹಿಳಾ ಸಂಘದ ಅಧ್ಯಕ್ಷೆ ಮಂಜುಳಾ, ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರುಗಳು ಹಾಗೂ ವಿವಿಧ ಘಟಕದ ಅಧ್ಯಕ್ಷರು ಸೇರಿದಂತೆ ಮಹಿಳಾ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.