ಮಡಿಕೇರಿ, ಮಾ. ೧೨: ಕಾಂತೂರು-ಮೂರ್ನಾಡು ಗ್ರಾ.ಪಂ.ಗೆ ಸೇರಿದ ಸಾರ್ವಜನಿಕ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಸ್ವಚ್ಛ ಸಂಕೀರ್ಣ ಘಟಕ, ಪೊಲೀಸ್ ಠಾಣೆ ಉದ್ಯಾನವನ ಹಾಗೂ ಮುತ್ತಾರ್‌ಮುಡಿ ಗ್ರಾಮದ ಅಮೃತ ಕೆರೆ ಕಾಮಗಾರಿಗಳ ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿ ಸಿದರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.