ಸೋಮವಾರಪೇಟೆ, ಮಾ. ೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ದೊಡ್ಡ ತೋಳೂರು ಗ್ರಾಮದಲ್ಲಿ ೫೩೨ನೇ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯಕ್ರಮದ ಉದ್ಘಾಟನಾ ಸಮಾ ರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆರೆ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಜೆ. ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಕೆರೆ ಕಾಮಗಾರಿಯ ಕುರಿತು ಮಾಹಿತಿ- ಮಾರ್ಗದರ್ಶನ ನೀಡಿದರು. ಕಾರ್ಯ ಕ್ರಮದಲ್ಲಿ ಯೋಜನಾಧಿಕಾರಿಗಳಾದ ರೋಹಿತ್, ಸೋಮವಾರಪೇಟೆಯ ತಹಶೀಲ್ದಾರ್ ನರಗುಂದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೀಪಕ್, ಪಂಚಾಯಿತಿ ಅಧ್ಯಕ್ಷ ನವೀನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ, ಕೆರೆ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಶಾಂತಳ್ಳಿ ವಲಯ ಮೇಲ್ವಿಚಾರಕಿ ಕಲಾವತಿ, ಕೃಷಿ ಮೇಲ್ವಿಚಾರಕ ರಾಜಣ್ಣ ಹಾಗೂ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.