ಕೂಡಿಗೆ, ಮಾ. ೧೨: ಸಮಾಜಕ್ಕೆ ನಮ್ಮಿಂದ ಸಾಧ್ಯವಾದಷ್ಟು ಉತ್ತಮ ಸೇವೆಯನ್ನು ಮಾಡಬೇಕು ಎಂದು ರೂಪದರ್ಶಿ ಅಪೂರ್ವ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡಲು ಬಯಸುವವರು ಗುರುಗಳ ಮಾರ್ಗದರ್ಶನದೊಂದಿಗೆ ಉತ್ತಮ ಮಾಹಿತಿಯನ್ನು ಪಡೆದುಕೊಂಡು ಸೂಕ್ತ ತಯಾರಿ ಮಾಡಿಕೊಳ್ಳಬೇಕು ಎಂದು ರೂಪದರ್ಶಿ ಅಪೂರ್ವ ರೈ ತಿಳಿಸಿದರು.

ಮಂಗಳೂರು ವಿಶ್ವ ವಿದ್ಯಾ ನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿಜ್ಞಾನ ಸಂಕೀರ್ಣ ವಿಭಾಗದ ಒಳಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೨೨-೨೩ನೇ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೃಜನಶೀಲತೆ ಎಂಬುದು ವಿದ್ಯಾರ್ಥಿ ಗಳನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಬೇಕು. ಆಧುನಿಕ ತಂತ್ರಜ್ಞಾನದ ಯುಗದ ದಿನಗಳಲ್ಲಿ ಸಂಬAಧಗಳು ನಾಶವಾಗುತ್ತಿವೆ. ಗುರು ಹಿರಿಯರನ್ನು ಗೌರವಿಸುವ ಮಾರ್ಗದರ್ಶನ ಪಡೆದುಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳುವಂತಾಗಬೇಕು. ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೆ ಸಂಬAಧಿಸಿದ ತರಬೇತಿ ಚಟುವಟಿಕೆ ಗಳನ್ನು ಏರ್ಪಡಿಸಿ ಸೃಜನಾತ್ಮಕವಾಗಿ ತೊಡಗಿಸಿ ಕೊಳ್ಳಬೇಕು. ಆ ಮೂಲಕ ಸುಪ್ತ ಪ್ರತಿಭೆಯ ಅನಾವರಣ ಹೊಂದಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಎಸ್. ರಾಜಕುಮಾರ್ ಮೇಟಿ ಅವರು, ಸ್ನಾತಕೋತ್ತರ ಕೇಂದ್ರವು ಕೊಡಗು, ದಕ್ಷಿಣ ಕನ್ನಡ, ಮೈಸೂರು, ಹಾಸನ ಹಾಗೂ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿನ ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ನೆರೆ ರಾಜ್ಯಗಳ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣದ ಸೌಲಭ್ಯವನ್ನು ಪಡೆದು ಕೊಳ್ಳುತ್ತಿದ್ದಾರೆ. ಸಾಂಸ್ಕೃತಿಕ ಜಗತ್ತಿಗೆ ಕಲೆಯ ರೂಪದ ಪ್ರತಿಭೆಯನ್ನು ಕಲಾತ್ಮಕವಾಗಿ ನೀಡುವುದಕ್ಕೆ ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ. ಸಂಸ್ಥೆಯ ವಿದ್ಯಾರ್ಥಿ ಪ್ರತಿನಿಧಿಗಳಾಗಿ ಆಯ್ಕೆ ಯಾಗಿರುವವರು ವಿಶ್ವ ವಿದ್ಯಾನಿಲಯದ ಮತ್ತು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಘನತೆ ಮತ್ತು ಗೌರವಕ್ಕೆ ಧಕ್ಕೆ ಬಾರದಂತೆ, ವಿದ್ಯಾರ್ಥಿ ಸಮೂಹದ ಕ್ಷೇಮಾಭಿವೃದ್ಧಿಗಾಗಿ ಹಾಗೂ ಸ್ನಾತ ಕೋತ್ತರ ಕೇಂದ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರದ್ಧೆ ಮತ್ತು ಭಕ್ತಿಯಿಂದ ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ತಮ್ಮಗೆ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕ ಪ್ರೊ. ಕೆ.ಕೆ. ಧರ್ಮಪ್ಪ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು, ಛಲ, ಶ್ರದ್ಧೆ, ಸತತ ಪ್ರಯತ್ನವನ್ನು ಅಳವಡಿಸಿ ಕೊಂಡಾಗ ಮಾತ್ರ ಶ್ರೇಷ್ಠ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಪಠ್ಯೇತರ ಚಟು ವಟಿಕೆಗಳಲ್ಲೂ ಸಹ ತೊಡಗಿಸಿ ಕೊಂಡಾಗ ಮಾತ್ರ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ. ಇಂದಿನ ಯುವ ಸಮುದಾಯ ಉತ್ತಮ ಸಮಾಜದ ನಿರ್ಮಾಣ ಮಾಡಬೇಕು. ಇದರ ಜೊತೆಗೆ ನಿಸ್ವಾರ್ಥ ಸೇವೆಯ ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಯಾವುದೇ ಸೇವೆ ಮಾಡುವಾಗ ಸಾರ್ಥಕ ಮನೋಭಾವ ಇದ್ದೇ ಇರಬೇಕು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಮಾತ್ರವಲ್ಲದೇ ಆಂತರಿಕವಾಗಿ ಆರೋಗ್ಯಕರ ಮತ್ತು ಸೃಜನಶೀಲ ಚಿಂತನೆ, ಉತ್ತಮ ನಾಯಕತ್ವ ಗುಣವನ್ನು ಮೈಗೂಡಿಸಿ ಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳಾದ ಅಧ್ಯಕ್ಷ ಹೆಚ್.ಕೆ. ಮಣಿಕುಮಾರ್, ಉಪಾಧ್ಯಕ್ಷ ಹೇಮಂತ್, ಕಾರ್ಯದರ್ಶಿ ಟಿ.ವೈ. ಹಿಮಂತ್, ಸಾಂಸ್ಕೃತಿಕ ಕಾರ್ಯದರ್ಶಿ ಮಾನಸ ಹಾಗೂ ಕ್ರೀಡಾ ಕಾರ್ಯದರ್ಶಿ ರಂಜಿತಾ ಅವರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.

ಕಾರ್ಯಕ್ರಮದಲ್ಲಿ ಸೂಕ್ಷಾö್ಮಣು ಜೀವ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ.ಎಸ್. ಗುಣಶ್ರೀ, ವಿವಿಧ ವಿಭಾಗಗಳ ಉಪ ನ್ಯಾಸಕರು, ಆಡಳಿತ ಸಿಬ್ಬಂದಿಗಳು, ತಾಂತ್ರಿಕ ವರ್ಗ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ನಿರೂಪಿಸಿದರು.