ಕೂಡಿಗೆ, ಮಾ. ೧೩: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಬಿಜೆಪಿ ಸದಸ್ಯ ಕೆ.ಆರ್. ಕುಮಾರ್ (೪೭) ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪಾಲ್ಗೊಂಡು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.