ವೀರಾಜಪೇಟೆ, ಮಾ. ೧೪: ವಿದ್ಯಾಭ್ಯಾಸ ಮನುಷ್ಯನ ಜೀವನ ಹಾಗೂ ಚಾರಿತ್ರö್ಯವನ್ನು ವೃದ್ಧಿಗೊಳಿಸುತ್ತದೆ ಎಂದು ಮಗ್ಗುಲದ ಲಿಟಲ್ ಸ್ಕೂರ್ಸ್ ಅಕಾಡೆಮಿಯ ಅಧ್ಯಕ್ಷೆ ಪೂಜಾ ರವಿಂದ್ರನ್ ಹೇಳಿದರು.
ವೀರಾಜಪೇಟೆಯ ಸೆರೆನಿಟಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಮತ್ತು ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು ರಾಷ್ಟಿçÃಯ ಶಿಕ್ಷಣ ನೀತಿ ಉತ್ತಮವಾಗಿದ್ದು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಏಕರೂಪ ಶಿಕ್ಷಣ ಲಭಿಸಿದರೆ ಯಾರು ಕೂಡ ಶಿಕ್ಷಣದಿಂದ ವಂಚಿತರಾಗುವುದಿಲ್ಲ ಎಂದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿ, ಹಬ್ಬ ಹರಿದಿನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಎಲ್ಲಾ ರಾಷ್ಟಿçÃಯ ಹಬ್ಬ ಸೇರಿದಂತೆ ಇತರ ಹಬ್ಬಗಳ ಮಹತ್ವವನ್ನು ತಿಳಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.
ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವೀರಾಜಪೇಟೆ ಠಾಣಾ ಮಹಿಳಾ ಹೆಡ್ ಕಾನ್ಸ್ಟೇಬಲ್ ಗೀತಾ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಮಾಜ ಮುಂದುವರೆದAತೆ ಮಹಿಳೆ ಕೂಡ ಸಮಾಜದ ಮುಖ್ಯ ವಾಹಿನಿಗೆ ಬಂದು ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲಾ ಸ್ಥಾನಮಾನವನ್ನು ಪಡೆದುಕೊಂಡಿದ್ದಾಳೆ ಎಂದರು.
ಹೆಣ್ಣುಮಕ್ಕಳು ವಾಟ್ಸಾಪ್ ಹಾಗೂ ಫೇಸ್ಬುಕ್ಗಳಲ್ಲಿ ತಮ್ಮ ಫೋಟೋಗಳನ್ನು ಹಾಕುವುದರ ಬಗ್ಗೆ ಎಚ್ಚರ ವಹಿಸಬೇಕೆಂದು ಕಿವಿಮಾತು ಹೇಳಿದರು.
ವೀರಾಜಪೇಟೆ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗೀತಾ, ಕುಟ್ಟಂದಿ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಶಕಿ ಎಂ.ಎಸ್. ರಮಿತ, ಮಗ್ಗುಲ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಐ.ಬಿ. ರಿಹಾನ ಇವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಿಮಾ ರಂಜನ್, ಗೋಲ್ಡನ್ ರಾಕ್ಸ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಸಜೇಶ್ ಭರತನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಅಂಗವಾಗಿ ಕಂಸಾಳೆ, ಡೊಳ್ಳುಕುಣಿತ, ವೀರಗಾಸೆಯನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.