ಸೋಮವಾರಪೇಟೆ, ಮಾ. ೧೩: ಪಟ್ಟಣದ ಶ್ರೀಮುತ್ತಪ್ಪಸ್ವಾಮಿ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಧ್ಯುಕ್ತವಾಗಿ ಚಾಲನೆಗೊಂಡಿತು.

ಶ್ರೀಮುತ್ತಪ್ಪಸ್ವಾಮಿ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಪೂಜಾ ಕೈಂಕರ್ಯಗಳು ಆರಂಭಗೊAಡವು. ನಂತರ ಅಧ್ಯಕ್ಷ ಎನ್.ಡಿ. ವಿನೋದ್‌ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ನಿನ್ನೆ ಸಂಜೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರ ನೇತೃತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಆಶ್ಲೇಷ ಪೂಜೆ ನೆರವೇರಿಸಲ್ಪಟ್ಟಿತು.

ನಂತರ ನೂತನವಾಗಿ ನಿರ್ಮಿಸಿರುವ ಅನ್ನದಾನ ಮಂಟಪವನ್ನು ಶಾಸಕ ಅಪ್ಪಚ್ಚು ರಂಜನ್ ದೀಪ ಬೆಳಗುವುದರ ಮೂಲಕ ಲೋಕಾರ್ಪಣೆ ಮಾಡಿದರು. ಈ ಸಂದರ್ಭ ಅತಿಥಿಗಳಾಗಿ ಚೌಡ್ಲು ಗ್ರಾಪಂ ಅಧ್ಯಕ್ಷ ಪಿ.ಎಂ.ಗಣಪತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಶ್ರೀಮುತ್ತಪ್ಪಸ್ವಾಮಿ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯದ ಅಧ್ಯಕ್ಷ ಎನ್.ಡಿ.ವಿನೋದ್‌ಕುಮಾರ್ ವಹಿಸಿದ್ದರು.

ಸೋಮವಾರದಂದು ಶ್ರೀಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಸಂಜೆ ಕೇರಳದ ಖ್ಯಾತ ಸಿಂಗಾರಿ ಮೇಳದೊಂದಿಗೆ ಕಳಸದ ಮೆರವಣಿಗೆಯು ದೇವಾಲಯದ ಆವರಣದಿಂದ ಆರಂಭಗೊAಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿತು.

ಸಂಜೆ ವಿಷ್ಣುಮೂರ್ತಿ ದೇವರ ವೆಳ್ಳಾಟಂ, ಕರಿಂಗುಟ್ಟಿ ದೇವರ ವೆಳ್ಳಾಟಂ, ನಂತರ ಕಂಡಕರ್ಣ ದೇವರ ವೆಳ್ಳಾಟಂ, ಭಗವತಿ ದೇವಿ, ರಕ್ತಚಾಮುಂಡಿ ದೇವಿಯ ವೆಳ್ಳಾಟಂ, ಪೊಟ್ಟನ್ ದೇವರ ವೆಳ್ಳಾಟಂ ನಂತರ ದೇವರ ಕಳಿಕ್ಕಾಪಾಟ್ ನೆರವೇರಿತು. ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನದಾನವನ್ನು ಏರ್ಪಡಿಸಲಾಗಿತ್ತು.