‘ನಾಟು ನಾಟು’ ಹಾಡು -ಸಾಕ್ಷö್ಯ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ಲಾಸ್ ಏಂಜಲೀಸ್, ಮಾ. ೧೩: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಎರಡು ಗರಿ ಸಿಕ್ಕಿದೆ. ಎಸ್. ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಹಾಗೂ ಕಾರ್ತಿಕಿ ಗೊನ್ಸಾಲ್ವೆಸ್ ಅವರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷö್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ಇದರೊಂದಿಗೆ ಭಾರತದ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರಕ್ಕೆ ಪ್ರಶಸ್ತಿ ಸಿಕ್ಕಿದೆ. ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್' ವಿಭಾಗದಲ್ಲಿ 'ದಿ ಎಲಿಫೆಂಟ್ ವಿಸ್ಪರರ್ಸ್' ಡಾಕ್ಯುಮೆಂಟರಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದು, ಡಾಕ್ಯುಮೆಂಟರಿಯನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನ ಮಾಡಿದ್ದಾರೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ 'ದಿ ಎಲಿಫೆಂಟ್ ವಿಸ್ಪರರ್ಸ್' ಪಾತ್ರವಾಗಿದೆ. ಒಂದು ಅನಾಥ ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಕ್ಷಿಣ ಭಾರತೀಯ ದಂಪತಿಯ ಕಥೆಯನ್ನು ‘ದಿ ಎಲಿಫೆಂಟ್ ವಿಸ್ಪರರ್ಸ್’ಡಾಕ್ಯುಮೆಂಟರಿಯು ಹೊಂದಿದೆ. ಅಮೇರಿಕಾದ ಲಾಸ್ ಏಂಜಲೀಸ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಗ್ಯಾಂಗ್ ಸ್ಟರ್ ಸಹೋದರನ ಭೇಟಿಗೆ ಅವಕಾಶ:
ಜೈಲರ್ ಸೇರಿ ೬ ಸಿಬ್ಬಂದಿ ಅಮಾನತು
ಬರೇಲಿ, ಮಾ. ೧೩: ಗ್ಯಾಂಗ್ ಸ್ಟರ್ - ರಾಜಕಾರಣಿ ಅತೀಕ್ ಅಹ್ಮದ್ ಸಹೋದರ ಅಶ್ರಫ್ ಅವರಿಗೆ ಜೈಲಿನಲ್ಲಿ ಅಕ್ರಮವಾಗಿ ಜನರ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಜೈಲರ್ ಮತ್ತು ಉಪ ಜೈಲರ್ ಸೇರಿದಂತೆ ಬರೇಲಿ ಕೇಂದ್ರ ಕಾರಾಗೃಹದ ಆರು ಸಿಬ್ಬಂದಿಯನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಐಜಿ (ಜೈಲು) ಆರ್ ಎನ್ ಪಾಂಡೆ ಅವರ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಜಿ(ಜೈಲು) ಆನಂದ್ ಕುಮಾರ್ ಅವರು ಹೇಳಿದ್ದಾರೆ. ಜೈಲರ್ ರಾಜೀವ್ ಕುಮಾರ್ ಮಿಶ್ರಾ, ಉಪ ಜೈಲರ್ ದುರ್ಗೇಶ್ ಪ್ರತಾಪ್ ಸಿಂಗ್, ಮುಖ್ಯ ಜೈಲು ವಾರ್ಡರ್ ಬ್ರಿಜ್ವೀರ್ ಸಿಂಗ್ ಮತ್ತು ಜೈಲು ವಾರ್ಡರ್ ಗಳಾದ ಮನೋಜ್ ಗೌರ್, ಡ್ಯಾನಿಶ್ ಮೆಹಂದಿ ಮತ್ತು ದಲ್ಪತ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಸ್ತುತ ಗುಜರಾತ್ ಜೈಲಿನಲ್ಲಿರುವ ಅಶ್ರಫ್ ಅವರ ಸಹೋದರ ಅತೀಕ್ ಅಹ್ಮದ್ ೨೦೦೫ ರಲ್ಲಿ ಆಗಿನ ಬಿಎಸ್ಪಿ ಶಾಸಕ ರಾಜು ಪಾಲ್ ಅವರ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆಗೆ ಸಂಬAಧಿಸಿದAತೆ ಅತೀಕ್ ಮತ್ತು ಅಶ್ರಫ್ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಿಸಲಾಗಿತ್ತು. ರಾಜುಪಾಲ್ ಹತ್ಯೆ ಪ್ರಕರಣದಲ್ಲಿ ಮಾಜಿ ಶಾಸಕ ಅಶ್ರಫ್ ಕೂಡ ಆರೋಪಿಯಾಗಿದ್ದಾರೆ.
ಪ್ರವಾಸಿಗರ ಮೇಲೆ ಹಲ್ಲೆ: ನಾಲ್ವರ ಬಂಧನ
ಪಣಜಿ, ಮಾ. ೧೩: ಗೋವಾದ ಪ್ರಸಿದ್ಧ ಅಂಜುನಾ ಬೀಚ್ನಲ್ಲಿ ದೆಹಲಿ ಮೂಲದ ಕುಟುಂಬವೊAದರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಪಾರ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವ ಕರಾವಳಿ ರಾಜ್ಯದಲ್ಲಿ ಇಂತಹ ಘಟನೆಗಳನ್ನು ಸಹಿಸಲಾಗುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಗ್ಯಾಂಗ್ ವೊಂದು ತಮ್ಮ ಕುಟುಂಬದ ಮೇಲೆ ಬೆಲ್ಟ್, ಬೇಸ್ ಬಾಲ್ ಬ್ಯಾಟ್ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೆಹಲಿಯ ೪೭ ವರ್ಷದ ನಿವಾಸಿಯೊಬ್ಬರು ಮಾರ್ಚ್ ೫ ರಂದು ದೂರು ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಾಳ್ವಿ ತಿಳಿಸಿದ್ದಾರೆ. ಎಫ್ ಐಆರ್ ಪ್ರಕಾರ ದೂರುದಾರರು ಮತ್ತಿತರ ಮೇಲೆ ಅವರು ಹಲ್ಲೆ ನಡೆಸಿದ್ದಾರೆ. ಸಂತ್ರಸ್ತರ ದೇಹದ ಮೇಲೆ ಗಾಯ ಉಂಟು ಮಾಡಲು ಆರೋಪಿಗಳು ಚಾಕು ಮತ್ತಿತರ ಶಸ್ತ್ರಾಸ್ತ್ರಗಳನ್ನು ಬಳಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಗುರುತಿಸಿ ಬಂಧಿಸಲಾಗಿದೆ. ಶೀಘ್ರವೇ ಹೆಚ್ಚಿನವರನ್ನು ಬಂಧಿಸಲಾಗುವುದು, ದಾಳಿಗೆ ಕಾರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.