'ಕೂಡಿಗೆ, ಮಾ. ೧೪: ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಆರೋಗ್ಯ ಇಲಾಖೆಯ ಕಚೇರಿಯ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಚುನಾಯಿತ ಜನಪ್ರತಿನಿಧಿಗಳಿಗೆ ಆರೋಗ್ಯ ಅರಿವು ಕಾರ್ಯಾಗಾರ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಾಗಾರದಲ್ಲಿ ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯ ಅಧಿಕಾರಿ ಶಾಂತಿ ಅವರು ಆರೋಗ್ಯ ಸೇವೆಗಳನ್ನು ಸಮುದಾಯಕ್ಕೆ ಸಮರ್ಪಕವಾಗಿ ತಲುಪಿಸಲು ಗ್ರಾಮ ಪಂಚಾಯಿತಿಗಳ ಪಾತ್ರದ ಬಗ್ಗೆ ವಿವರಿಸಿದರು.
ಪರಿಸರ ನೈರ್ಮಲ್ಯ ಶುದ್ಧ ಕುಡಿಯುವ ನೀರು, ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳು, ಅದರ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುವ ಬಗ್ಗೆ ಆಯಾ ವಾರ್ಡ್ಗಳಲ್ಲಿ ಗ್ರಾಮಸ್ಥರಿಗೆ ತಿಳಿಸುವ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿಯನ್ನು ಆರೋಗ್ಯ ಇಲಾಖೆಯ ವತಿಯಿಂದ ನೀಡಲಾಯಿತು.
ಈ ಸಂದರ್ಭ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸೇರಿದಂತೆ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಇಲಾಖೆಯ ಅಧಿಕಾರಿಗಳಾದ ವಿಶ್ವಜ್ಞ, ಪ್ರಣಿತ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.