ಚೆಯ್ಯಂಡಾಣೆ, ಮಾ. ೧೩: ಚೆಯ್ಯಂಡಾಣೆಯ ಲಕ್ಷಿö್ಮÃ ಮಹಿಳಾ ಸಮಾಜದಲ್ಲಿ ನರಿಯಂದಡ ಗ್ರಾಮ ಪಂ. ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರಿಗೆ ಕೊಡಗು ಜಿ. ಪಂ. ಕೃಷಿ ಇಲಾಖೆ ವತಿಯಿಂದ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕೃಷಿ ಇಲಾಖೆಯ ಅಧಿಕಾರಿ ನಾರಾಯಣ ರೆಡ್ಡಿ ಎರೆಹುಳು ಗೊಬ್ಬರ ಉತ್ಪಾದನೆ ಮತ್ತು ಬಳಕೆ, ಸಾವಯವ ಗೊಬ್ಬರ ಮತ್ತು ಅವುಗಳ ಮಹತ್ವ, ಹಸಿರೆಲೆ ಗೊಬ್ಬರಗಳ ಬಳಕೆ, ಕೊಡಗು ಜಿಲ್ಲೆಗೆ ಸೂಕ್ತವಾದ ಭತ್ತದ ತಳಿಗಳು ಇನ್ನಿತರ ಹಲವು ಮಾಹಿತಿಗಳನ್ನು ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್.ಪುಷ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಮುಂಡಿಯೋಳAಡ ಈರಪ್ಪ, ಪೆಮ್ಮಂಡ ಕಾವೇರಮ್ಮ ಸಂಜೀವಿನಿ ಒಕ್ಕೂಟದವರು ಹಾಜರಿದ್ದರು.