ನಾಪೋಕ್ಲು, ಮಾ. ೧೪: ಸಮೀಪದ ಬಲಮುರಿಯ ಅಗಸ್ತೆö್ಯÃಶ್ವರ ದೇವಾಲಯದಲ್ಲಿ ವಾರ್ಷಿಕ ಉತ್ಸವ ವಿಜೃಂಭಣೆಯಿAದ ಜರುಗಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ಒಂದು ವಾರಗಳ ಕಾಲ ನಡೆಯಿತು. ಶುಕ್ರವಾರ ಸಂಜೆ ಕಾವೇರಿ ಹೊಳೆಯಲ್ಲಿ ದೇವರ ಅವಭೃತ ಸ್ನಾನ ನೆರವೇರಿ ದೇವಾಲಯದ ಪ್ರಾಂಗಣದಲ್ಲಿ ನಡೆದ ದೇವರ ನೃತ್ಯಬಲಿಯನ್ನು ಅಧಿಕ ಸಂಖ್ಯೆಯ ಭಕ್ತರು ವೀಕ್ಷಿಸಿದರು. ಅರ್ಚಕ ಮಹಾಬಲೇಶ್ವರ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು.
ಶನಿವಾರ ಅಜ್ಜಪ್ಪ ಕೋಲ ಹಾಗೂ ಚಾಮುಂಡಿ ಕೋಲಗಳು ಜರುಗಿ ದೇವಾಲಯದಲ್ಲಿ ಜರುಗಿದ ಶುದ್ಧ ಕಲಶದೊಂದಿಗೆ ಉತ್ಸವ ಸಂಪನ್ನಗೊAಡಿತು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರ ಪರ ಊರಿನ ಭಕ್ತಾದಿಗಳು ಭಾಗವಹಿಸಿದ್ದರು.