ಪೊನ್ನಂಪೇಟೆ, ಮಾ. ೧೪: ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಚೀನಿವಾಡದ ಪೈಸಾರಿ ಜಾಗದಲ್ಲ್ಲಿ ಕಾಡಾನೆಯೊಂದು ಕಳೆದ ಎರಡು ಮೂರು ದಿನಗಳ ಹಿಂದೆ ಮರಿ ಹಾಕಿದ್ದು, ಕಾರಣಾಂತರಗಳಿAದ ಕಾಡಾನೆ ಮರಿ ಸ್ಥಳದಲ್ಲಿಯೇ ಅಸುನೀಗಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ತಿಳಿದ ಪೊನ್ನಂಪೇಟೆ ವಲಯ ಉಪ ಅರಣ್ಯಾಧಿಕಾರಿ ದಿವಾಕರ್ ಮತ್ತು ಆರ್‌ಆರ್‌ಟಿ ಸಿಬ್ಬಂದಿ ಸ್ಥಳ ಪರಿಶೀಲನೆಗೆ ತೆರಳಿದ್ದರು. ಈ ಸಂದರ್ಭ ಸಿಟ್ಟಿಗೆದ್ದ ತಾಯಿ ಆನೆ ಸಿಬ್ಬಂದಿಗಳನ್ನು ಅಟ್ಟಾಡಿಸಿದ ಘಟನೆ ನಡೆದಿದೆ. ಆರ್.ಆರ್.ಟಿ. ತಂಡದ ಸಿಬ್ಬಂದಿ ತೇಜಸ್ ಅವರು ತಮ್ಮ ಜೀವ ರಕ್ಷಣೆ ಮಾಡಿಕೊಳ್ಳಲು ಓಡಿಹೋಗುತ್ತಿದ್ದ ಸಂದರ್ಭ ಕಲ್ಲಿಗೆ ಕಾಲು ತಗುಲಿ ಚರಂಡಿಗೆ ಬಿದ್ದ ಪರಿಣಾಮ ಅವರ ಎಡ ಕಾಲಿನ ತೊಡೆ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಗಾಯಾಳುವಿಗೆ ಗೋಣಿಕೊಪ್ಪ ಲೋಪಮುದ್ರಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ರವಾನಿಸಲಾಗಿದೆ.