ಸೋಮವಾರಪೇಟೆ, ಮಾ. ೧೪: ಲಿಂಗಾಯತ ಪಂಚಮಸಾಲಿ ಜನಾಂಗಕ್ಕೆ ೨ಎ ಮೀಸಲಾತಿ ನೀಡಬೇಕೆಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ೫೩ ದಿನಗಳಿಂದ ನಡೆಯುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಮಂದಿಯೂ ಭಾಗಿಯಾಗಿದ್ದಾರೆ. ಈ ಮೂಲಕ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಸಮುದಾಯ ಸಂಘಟನೆಗಳ ಪ್ರಮುಖರಾದ ಮೋಹನ್, ಅಜ್ಜಳ್ಳಿ ರವಿ, ವೀರಶೈವ ಮಹಾಸಭಾದ ಸೋಮವಾರಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಆದರ್ಶ, ಲಿಖಿತ್, ಶಿವಶಂಕರ್, ಕುಮಾರ್, ಉದಯ, ಪ್ರತಾಪ್, ಪ್ರಶಾಂತ್ ಸೇರಿದಂತೆ ಹಲವರು ಪಂಚಮಸಾಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ