ಸುಳ್ಳು ಆಧಾರಿತ, ಸಂಘಟಿತ ವೈಯಕ್ತಿಕ ದಾಳಿ; ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ

ನವದೆಹಲಿ, ಮಾ. ೧೪: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್‌ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ನೆರವಿವಾಗಿ ಎಂದಿಗೂ ವಿದೇಶಗಳನ್ನು ಆಹ್ವಾನಿಸಿಲ್ಲ. ಅವರು ಸುಳ್ಳು ಆಧಾರಿತ, ತಪ್ಪು ಮಾಹಿತಿಯನ್ನೊಳಗೊಂಡ ಸಂಘಟಿತ ವೈಯಕ್ತಿಕ ದಾಳಿಗಳಿಗೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ನೀಡಿದ್ದ ಹೇಳಿಕೆ ಸಂಸತ್‌ನಲ್ಲೂ ಗದ್ದಲ ಉಂಟುಮಾಡಿತ್ತು. ಪರಿಣಾಮ ಬಜೆಟ್ ಅಧಿವೇಶದ ಉತ್ತರಾರ್ಧ ಕಲಾಪದ ಮೊದಲ ಎರಡು ದಿನಗಳು ವ್ಯರ್ಥವಾಗಿತ್ತು. ಕೇಂದ್ರ ಸಚಿವರ ಗುಂಪು ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಕ್ಷಮೆ ಯಾಚನೆಗೆ ಪಟ್ಟು ಹಿಡಿದಿದ್ದರೆ, ಇದನ್ನು ಎದುರಿಸಲು ಕಾಂಗ್ರೆಸ್ ಅದಾನಿ ವಿಷಯವಾಗಿ ಜಂಟಿ ಸದನ ಸಮಿತಿ ತನಿಖೆಯ ಅಸ್ತ್ರವನ್ನು ಪ್ರಯೋಗಿಸಿದೆ. ರಾಹುಲ್ ಗಾಂಧಿ ಅವರ ಬ್ರಿಟನ್ ಪ್ರವಾಸ ಹಾಗೂ ಸಂವಾದ ಕಾರ್ಯಕ್ರಮಗಳಲ್ಲಿ ಅವರ ಜೊತೆಗೇ ಇದ್ದ ಕಾಂಗ್ರೆಸ್‌ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ಆಡಳಿತ ಪಕ್ಷದ ನಾಯಕರಿಂದ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ವಾಗ್ದಾಳಿಗಳಿಗೆ ಪ್ರತಿಯಾಗಿ ತಮ್ಮ ನಾಯಕನನ್ನು ಸಮರ್ಥಿಸಿಕೊಳ್ಳುವ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಲಂಡನ್‌ನಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರ ಬಗ್ಗೆ ಸುಳ್ಳು ಪ್ರಚಾರವನ್ನು ನಿಲ್ಲಿಸಿ, ನೀವು ಅಲ್ಲಿ ಇದ್ರಾ? ನೀವು ವೀಡಿಯೋ ನೋಡಿದ್ದೀರಾ? ಅವರು ಹೇಳಿದ್ದೇನು ಎಂಬುದು ನಿಮಗೆ ನಿಜವಾಗಿ ತಿಳಿದಿದೆಯಾ? ಅವರು ಹೇಳಿದ್ದ ಆ ಪ್ರಸಂಗ, ಮುಖ್ಯ ಸಂದೇಶ ಏನು ಅಂತ ತಿಳಿದಿದೆಯಾ? ಎಂದು ಪ್ರಶ್ನಿಸಿರುವ ಸ್ಯಾಮ್ ಪಿತ್ರೋಡಾ, ಸ್ಪಷ್ಟನೆ ನೀಡುವುದಕ್ಕಾಗಿ ಈ ಅಂಶಗಳನ್ನು ಪರಿಗಣಿಸಿ ಎಂದು ಹೇಳಿದ್ದಾರೆ. ಭಾರತದ ಪ್ರಜಾಪ್ರಭುತ್ವ ಜಾಗತಿಕ ಸಾರ್ವಜನಿಕ ಅಂಶವನ್ನು ಹೊಂದಿರುವುದಾಗಿದೆ. ಭಾರತದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯ ಬಗ್ಗೆ ಕಳವಳವಿದೆ. ಇದು ಭಾರತದ ಸಮಸ್ಯೆಯಾಗಿದ್ದು, ನಾವು ಇದರೊಂದಿಗೆ ವ್ಯವಹರಿಸುತ್ತೇವೆ. ಎಂದು ಹೇಳಿರುವುದಾಗಿ ಪಿತ್ರೋಡಾ ಹೇಳಿದ್ದಾರೆ.

ಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ-೨೦ ಮಂದಿ ಪೊಲೀಸರ ವಶಕ್ಕೆ

ರಟ್ಟಿಹಳ್ಳಿ, ಮಾ. ೧೪: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ‍್ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ ೯ ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ‍್ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಬೈಕ್ ರ‍್ಯಾಲಿ ವೇಳೆ ಆಟೋ ಚಾಲಕನಿಗೆ ಥಳಿಸಲಾಗಿದ್ದು, ಮಸೀದಿ ಮತ್ತು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲ ಮಕ್ಕಳು ಹಾಗೂ ಮಹಿಳೆಯರಿಗೆ ಕಲ್ಲು ತೂರಾಟದಿಂದ ಗಾಯವಾಗಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ೨೦ ಮಂದಿಯನ್ನು ವಶಕ್ಕೆ ಪಡೆದಿದ್ದು, ಹೈ ಅಲರ್ಟ್ ಘೋಷಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ಮೂರ್ತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು. ಕೈಯಲ್ಲಿ ಕಲ್ಲು ಹಿಡಿದು ನಿಂತಿದ್ದ ಯುವಕರು, ಬ್ಯಾರಿಕೇಡ್ ಕಿತ್ತೆಸೆದು ಮೆರವಣಿಗೆಗೆ ಅಡ್ಡಿಪಡಿಸಿದ್ದರು. ಗಲಾಟೆ ನಡೆದಿದ್ದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಇಂದು ಬೃಹತ್ ಬೈಕ್ ರ‍್ಯಾಲಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ೧೦೦ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ

ಗಂಗಾವತಿ, ಮಾ. ೧೪: ಕೊಪ್ಪಳ ಜಿಲ್ಲೆಯಲ್ಲಿ ೧೦೦ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗಂಗಾವತಿಯಲ್ಲಿAದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳು ಸ್ಥಳೀಯ ಮಟ್ಟದಲ್ಲಿ ಸಂಸ್ಕರಣಗೊAಡು, ಬ್ರ‍್ಯಾಂಡ್ ನೇಮ್ ಇರುವ ಮಾರುಕಟ್ಟೆ ಹಾಗೂ ರೈತನ ಬೆಳೆಗೆ ಉತ್ತಮ ಬೆಲೆ ದೊರಕಲು ಅನುಕೂಲವಾಗಲಿದೆ ಎಂದರು. ಕೊಪ್ಪಳ ಜಿಲ್ಲೆ ಏತ ನೀರಾವರಿಯನ್ನು ನಾರಾಯಣಪುರ ಯೋಜನೆಗೆ ಜೋಡಿಸಿ, ಗೋದಾವರಿಯ ೧.೮ ಟಿಎಂಸಿ ನೀರನ್ನು ಇಲ್ಲಿನ ಏತನೀರಾವರಿಗೆ ನೀಡಲಾಯಿತು. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಸಾಕಾರಗೊಳ್ಳದಿದ್ದ ಕೊಪ್ಪಳ ಏತನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕಾಯಕಲ್ಪ ಕಾಣುತ್ತಿದೆ. ಗಂಗಾವತಿ ತಾಲ್ಲೂಕಿನಲ್ಲಿ ೪೧ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದರು. ಮುಳವಾಡಿ, ಚಿಮ್ಮಲಗಿ, ಗುತ್ತಿಬಸವಣ್ಣ ಏತನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ. ತುಂಗಭದ್ರಾ ಯೋಜನೆ, ತುಂಗಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಯೋಜನೆ, ಎನ್‌ಎಲ್‌ಬಿಸಿ ಯೋಜನೆಗಳಿಂದ ಸುಮಾರು ೭ ಲಕ್ಷ ಎಕರೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ೧.೫೭ ಲಕ್ಷ ರೈತರಿಗೆ ರೂ. ೪೫೬ ಕೋಟಿ ಪಾವತಿಯಾಗಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ರೈತರಿಗೆ ಜೀವವಿಮೆ ಸೌಲಭ್ಯ ಜಾರಿಗೊಳಿಸಿದ್ದು, ರೈತರ ಉತ್ತಮ ಆರೋಗ್ಯ ಚಿಕಿತ್ಸೆಗೆ ಯಶಸ್ವಿನಿ ಯೋಜನೆಯನ್ನು ಪುನರಾರಂಭಿಸಲಾಗಿದೆ. ಆವರ್ತ ನಿಧಿಯನ್ನು ೩೬೦೦ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ರೈತವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುತ್ತಿದೆ. ದೇಶದ ಜಿಡಿಪಿ ಶೇ. ೬ ರಿಂದ ಶೇ. ೮ ರಷ್ಟಿದ್ದರೆ, ರಾಜ್ಯದ ಜಿಡಿಪಿ ಶೇ. ೯ ರಷ್ಟಿದೆ. ಈಗ ಕರ್ನಾಟಕದ ತಲಾವಾರು ಆದಾಯ ೩.೪೭ ಲಕ್ಷವಾಗಿದೆ. ರಾಜ್ಯದ ಜನ ಶ್ರೀಮಂತರಾದರೆ, ರಾಜ್ಯ ಶ್ರೀಮಂತವಾಗುತ್ತದೆ ಎಂದರು.

ಫೇಸ್‌ಬುಕ್ ಮಾತೃಸಂಸ್ಥೆ ಮೆಟಾದಿಂದ ೧೦ ಸಾವಿರ ನೌಕರರ ವಜಾ

ವಾಷಿಂಗ್ಟನ್, ಮಾ. ೧೪: ಮಾತೃಸಂಸ್ಥೆ ಮೆಟಾ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು, ೧೦,೦೦೦ ಕಾರ್ಮಿಕರನ್ನು ವಜಾಗೊಳಿಸಲಿದೆ ಎಂದು ವರದಿಯೊಂದು ತಿಳಿಸಿದೆ. ಮೆಟಾ ಸಂಸ್ಥೆಯಲ್ಲಿ ೫,೦೦೦ ಓಪನ್ ಉದ್ಯೋಗಗಳನ್ನು ಸಹ ಭರ್ತಿ ಮಾಡುವುದಿಲ್ಲ ಎಂದು ಎಪಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮೆಟಾ ಪ್ಲಾಟ್‌ಫಾರ್ಮ್, ಮುಂದಿನ ಕೆಲವು ತಿಂಗಳುಗಳಲ್ಲಿ ಹಲವಾರು ಸುತ್ತುಗಳಲ್ಲಿ ಹೆಚ್ಚುವರಿ ಉದ್ಯೋಗ ಕಡಿತ ಮಾಡಲು ಯೋಜಿಸುತ್ತಿದೆ ಎಂದು ವಾಲ್ ಸ್ಟಿçÃಟ್ ಜರ್ನಲ್ ವರದಿ ಮಾಡಿತ್ತು.

ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್

ವೇ ಟೋಲ್: ರಾಷ್ಟಿçÃಯ ಹೆದ್ದಾರಿ

ಅಂಜನಾದ್ರಿ ಬೆಟ್ಟ, ಮಾ. ೧೪: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಟೋಲ್ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಈ ಕುರಿತು ರಾಷ್ಟಿçÃಯ ಹೆದ್ದಾರಿಯವರಿಗೆ ವಿವರವಾದ ವರದಿ ಕೊಡಲು ತಿಳಿಸಿದ್ದೇನೆ ಎಂದಿದ್ದಾರೆ. ಟೋಲ್ ಶುಲ್ಕ ಆರಂಭವಾದಾಗ ಈ ರೀತಿಯ ವಿವಾದಗಳು ಸಾಮಾನ್ಯ. ಅವುಗಳನ್ನು ಪರಿಹರಿಸುತ್ತೇವೆ. ರಘು ಆಚಾರ್ ಆಡಿಯೋ ಬಗ್ಗೆ ಕೇಳಲಾದ ಪ್ರಶ್ನೆಗೆ ಈ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಯಾರು ಏನು ಮಾತನಾಡುತ್ತಾರೆ, ಅದಕ್ಕೆ ಅವರೇ ಜವಾಬ್ದಾರರು ಎಂದರು. ಪಕ್ಷ ನಮಗೆ ತಾಯಿಯಿದ್ದಂತೆ, ನಾವೆಲ್ಲಾ ಮಕ್ಕಳಂತೆ, ಪಕ್ಷಕ್ಕೆ ತಕ್ಕಂತೆ ಎಲ್ಲರೂ ನಡೆದುಕೊಳ್ಳುತ್ತಾರೆ, ನಡೆದುಕೊಳ್ಳಬೇಕಾಗುತ್ತದೆ ಎಂದು ಟಿಕೆಟ್ ಹಂಚಿಕೆ, ಪಕ್ಷಕ್ಕೆ ಬರುವವರು, ಪಕ್ಷ ಬಿಟ್ಟು ಹೋಗುವವರ ಕುರಿತು ಕೇಳಿದ್ದಕ್ಕೆ ಸಿಎಂ ಪ್ರತಿಕ್ರಿಯಿಸಿದರು. ಈಗಾಗಾಗಲೇ ಸರ್ಕಾರ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ರೂ. ೧೨೦ ಕೋಟಿ ಅನುದಾನ ನೀಡಿದೆ. ಅದರಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯು ರೂ. ೨೦ ಕೋಟಿ ಅನುದಾನ ನೀಡಿದ್ದು, ಒಟ್ಟು ರೂ. ೧೪೦ ಕೋಟಿ ಅನುದಾನದ ವಿವಿಧ ಯೋಜನೆಗಳು ನಡೆಯುತ್ತಿವೆ ಎಂದರು.