ಮಡಿಕೇರಿ, ಮಾ. ೧೪: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಮಹೇಶ್ ನಾಚಯ್ಯ, ವಿಜಯ ಕರ್ನಾಟಕ ಹಿರಿಯ ಛಾಯಾಗ್ರಾಹಕ ನಾಗೇಶ್ ಪಾಣತ್ತಲೆ ಇವರುಗಳು ನಿನ್ನೆ ದಿನ ಪ್ರಶಸ್ತಿ ಸ್ವೀಕರಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ

ಆರ್. ಅಶೋಕ್ ಪ್ರಶಸ್ತಿ ಪ್ರದಾನ ಮಾಡಿದರು.