ವೀರಾಜಪೇಟೆ, ಮಾ. ೧೪: ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಪ್ರೊ. ಇಟ್ಟಿರ ಕೆ. ಬಿದ್ದಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಕೊಳ್ಳಬೇಕು. ಜೀವನದಲ್ಲಿ ಎದುರಾಗುವ ಯಾವುದೇ ಸಮಸ್ಯೆಗೆ ಅಂಜದೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕೆಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಾಂಶುಪಾಲ ಎನ್.ಎಂ. ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಎ.ಎಂ. ಡಯಾನಾ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಪ್ರಾರಂಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ದೀಪು ಹಾಗು ತಂಡದಿAದ ಪ್ರಾರ್ಥನೆ ಸಲ್ಲಿಸಲಾಯಿತು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ. ದಮಯಂತಿ ಸ್ವಾಗತಿಸಿ, ಉಪನ್ಯಾಸಕಿ ಕೆ.ಪಿ. ಗಾಯತ್ರಿ ವಂದಿಸಿದರು. ವಿದ್ಯಾರ್ಥಿಗಳಾದ ಹಸೀನಾ ಮತ್ತು ಕಾವೇರಮ್ಮ ಕಾರ್ಯಕ್ರವನ್ನು ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದರು.