೫-೮ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು, ಮಾ. ೧೫: ೫-೮ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ನ ವಿಭಾಗೀಯ ಪೀಠ ಅನುಮತಿ ನೀಡಿದೆ. ೫ ಮತ್ತು ೮ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ೧೦ ದಿನಗಳ ಬಳಿಕ ಅಂದರೆ ತಾ. ೨೭ ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ೫-೮ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಆದ್ದರಿಂದ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.
ಕೆಪಿಟಿಸಿಎಲ್ ನೌಕರರ ವೇತನ ಶೇ.೨೦ರಷ್ಟು ಹೆಚ್ಚಳ: ಮುಷ್ಕರ ವಾಪಸ್
ಬೆಂಗಳೂರು, ಮಾ. ೧೫: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. ೨೦೨೨ರ ಏಪ್ರಿಲ್ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇ. ೨೦ ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ. ಈ ಹಿನ್ನೆಲೆ ಕೆಪಿಟಿಸಿಎಲ್ ನೌಕರರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ನೌಕರರು ಮತ್ತು ಅಧಿಕಾರಿಗಳ ವೇತನ ಬೇಡಿಕೆ ಪರಿಷ್ಕರಣೆ ಆಗಲೇಬೇಕು. ಕಳೆದ ವರ್ಷ ಏಪ್ರಿಲ್ನಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು ಎಂದು ಬೇಡಿಕೆ ಇಟ್ಟಿದ್ದರು. ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸದಿದ್ದಾಗ ಮುಷ್ಕರಕ್ಕೆ ಮುಂದಾಗಿದ್ದರು. ಏPಖಿಅಐ ನೌಕರರು ರಾಜ್ಯ ಸರ್ಕಾರಕ್ಕೆ ನೀಡಿದ ೧೪ ದಿನಗಳ ಗಡುವು ಇಂದಿಗೆ ಮುಕ್ತಾಯವಾಗಿತ್ತು. ಇದರಿಂದ ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್ ನೌಕರರ ಸಂಘ ಕರೆ ಕೊಟ್ಟಿತ್ತು. ಈ ಹಿನ್ನೆಲೆ ಸುಮಾರು ೫೦ ಸಾವಿರ ನೌಕರರು ನಾಳೆಯ ಮುಷ್ಕರದಲ್ಲಿ ಭಾಗಿಯಾಗಲಿದ್ದರು.
ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವೆ
ಅಗರ್ತಲಾ, ಮಾ. ೧೫: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಧನಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ಸಂಸದೆ ಮತ್ತು ಕೇಂದ್ರ ಸಚಿವೆಯಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ನೀಡಿತ್ತು. ಆದರೆ ಸಂಸದ ಮತ್ತು ಶಾಸಕನಾಗಿ ಏಕಕಾಲದಲ್ಲಿ ಕೆಲಸ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ. ಹೀಗಾಗಿ ನಾನು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಭೌಮಿಕ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಭೌಮಿಕ್ ಅವರು, ಧನ್ಪುರದ ಜನರಿಗೆ ಬಿಜೆಪಿ-ಐಪಿಎಫ್ಟಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸಲಿದೆ ಎಂದು ಭರವಸೆ ನೀಡಿದರು. ಭೌಮಿಕ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಹಂಗಾಮಿ ಸ್ಪೀಕರ್ ಬಿನೋಯ್ ಭೂಷಣ್ ದಾಸ್ ಅವರು ತಿಳಿಸಿದ್ದಾರೆ. ಭೌಮಿಕ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಧನಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಆರು ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ.
ಮಹಾರಾಷ್ಟçದಲ್ಲಿ ಹೆಚ್೩ಎನ್೨ಗೆ ಇಬ್ಬರು ಬಲಿ
ಮುಂಬೈ, ಮಾ. ೧೫: ಮಹಾರಾಷ್ಟçದಲ್ಲಿ ಹೆಚ್೩ಎನ್೨ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅವರಲ್ಲಿ ೭೪ ವರ್ಷದ ವ್ಯಕ್ತಿಯೊಬ್ಬರೂ ಹೆಚ್೩ಎನ್೨ ಉಪಥಳಿಯಿಂದ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ ಕೋವಿಡ್-೧೯ ಮತ್ತು ಇನ್ಫ್ಲುಯೆಂಜಾ ವೈರಸ್ನಿಂದ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟç ಆರೋಗ್ಯ ಸಚಿವ ತಾನಾಜಿ ಸಾವಂತ್ ವಿಧಾನಸಭೆಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು ೩೬೧ ಹೆಚ್೩ಎನ್೨ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಸಂಬAಧ ಇನ್ನೆರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಮಾಡುವಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಹಾರಾಷ್ಟç ಸಚಿವರು ಜನರಿಗೆ ಸಲಹೆ ನೀಡಿದ್ದಾರೆ. ಅಹ್ಮದ್ನಗರದಲ್ಲಿ ೨೩ ವರ್ಷದ ಎಂಬಿಬಿಎಸ್ ಮೊದಲ ವರ್ಷದ ವಿದ್ಯಾರ್ಥಿ ಸೇರಿದಂತೆ ಇಬ್ಬರು ವ್ಯಕ್ತಿಗಳು ಇನ್ಫ್ಲುಯೆಂಜಾದಿAದ ಸಾವನ್ನಪ್ಪಿದ್ದಾರೆ.
ನಾಗ್ಪುರ ಸೇರಿದಂತೆ ೧೧ ಕಚೇರಿ ಮೇಲೆ ಇಡಿ ದಾಳಿ
ನಾಗ್ಪುರ, ಮಾ. ೧೫: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚರ್ಚ್ ಆಫ್ ನಾಗ್ಪುರ ಸೇರಿದಂತೆ ಅದರ ೧೧ ಕಚೇರಿ (ಸಿಎನ್ಐ) ಮೇಲೆ ದಾಳಿ ನಡೆಸಿದ್ದಾರೆ. ಭೋಪಾಲ್ನಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಇ.ಡಿ ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆದಿದೆ. ಜಬಲ್ಪುರ ಪ್ರಾಂತ್ಯದ ಸಿಎನ್ಐನ ಬಿಷಪ್ ಪಿ.ಸಿ. ಸಿಂಗ್ ವಿರುದ್ಧ ವಂಚನೆಯ ಪ್ರಕರಣದ ಭಾಗವಾಗಿ ಈ ದಾಳಿಯಾಗಿದ್ದು, ಸದರ್ ಪ್ರದೇಶದ ಪ್ರೊಟೆಸ್ಟಂಟ್ ಪಂಗಡದ ಸಿಎನ್ಐ ಕಚೇರಿಯಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಿಂಗ್ ಅವರನ್ನು ಸೆಪ್ಟೆಂಬರ್ ೨೦೨೨ ರಲ್ಲಿ ಬಂಧನಕ್ಕೊಳಪಡಿಸಲಾಗಿತ್ತು. ಪ್ರಕರಣಕ್ಕೆ ಸಂಬAಧಿಸಿದAತೆ ಪಿ.ಸಿ. ಸಿಂಗ್ ಅವರ ನಿವಾಸದಿಂದ ೧.೬ ಕೋಟಿ ರೂಪಾಯಿ ಮೌಲ್ಯದ ಭಾರತೀಯ ಹಾಗೂ ವಿದೇಶಿ ಕರೆಸಿಯನ್ನು ವಶಕ್ಕೆ ಪಡೆಯಲಾಗಿತ್ತು. ಆಗ ಅವರು ಜರ್ಮನಿಯಲ್ಲಿದ್ದರು. ಪಿ.ಸಿ. ಸಿಂಗ್ ಅಧ್ಯಕ್ಷರಾಗಿರುವ ಶೈಕ್ಷಣಿಕ ಸೊಸೈಟಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಎಂಬ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿಗಳಿಂದ ೨೦೦೪-೦೫, ೨೦೧೧-೧೨ರ ಅವಧಿಯಲ್ಲಿ ಸಂಗ್ರಹಿಸಲಾದ ಶುಲ್ಕವನ್ನು ಧಾರ್ಮಿಕ ಸಂಸ್ಥೆಗಳಿಗೆ ವರ್ಗಾವಣೆ ಮಾಡಿ ಅದನ್ನು ಬಿಷಪ್ನ ವೈಯಕ್ತಿಕ ಅಗತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ರೀತಿಯಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣ ಸಿಎನ್ಐನ ನಾಗ್ಪುರ ಕಚೇರಿಗೂ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಶ್ಚಿಮ ಘಟ್ಟಗಳಲ್ಲಿನ ಬೆಂಕಿ ನಂದಿಸಲು ಕೈಜೋಡಿಸಿದ ಕರ್ನಾಟಕ-ಗೋವಾ ಸರ್ಕಾರ
ಬೆಳಗಾವಿ, ಮಾ. ೧೫: ಕರ್ನಾಟಕದ ಗಡಿಗೆ ಹೊಂದಿಕೊAಡAತಿರುವ ಗೋವಾದ ಮಹಾದಾಯಿ ವನ್ಯಜೀವಿ ಧಾಮದಲ್ಲಿ ಭಾರಿ ಕೆಲ ದಿನಗಳ ಹಿಂದೆ ಕಾಡ್ಗಿಚ್ಚು ಕಾಣಿಸಿಕೊಂಡು, ಸಾಕಷ್ಟು ಅರಣ್ಯ ನಾಶಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗಡಿಯುದ್ದಕ್ಕೂ ಪಶ್ಚಿಮ ಘಟ್ಟಗಳಲ್ಲಿ ಸಸ್ಯ ಮತ್ತು ಪ್ರಾಣಿಗಳಿಗೆ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಲು ಗೋವಾ ಸರ್ಕಾರವು, ಕರ್ನಾಟಕದೊಂದಿಗೆ ಕೈಜೋಡಿಸಲು ಮುಂದಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಎದುರಾಗುವ ಅಗ್ನಿ ಅವಘಡಗಳ ನಿಯಂತ್ರಿಸಲು ಗೋವಾ ಮತ್ತು ಕರ್ನಾಟಕ ಸರ್ಕಾರಗಳು, ಅಂತಾರಾಜ್ಯ ತಂತ್ರ ರೂಪಿಸು ಮುಂದಾಗಿವೆ ಎಂದು ತಿಳಿದುಬಂದಿದೆ. ಗೋವಾ ಮತ್ತು ಕರ್ನಾಟಕದ ಕಾಡುಗಳಲ್ಲಿ ಬೆಂಕಿಯನ್ನು ನಿಯಂತ್ರಿಸಲು ಕರ್ನಾಟಕದೊಂದಿಗೆ ಪರಿಣಾಮಕಾರಿ ಸಮನ್ವಯಕ್ಕಾಗಿ ಗೋವಾ ಸರ್ಕಾರ, ಉನ್ನತ ಅರಣ್ಯ ಅಧಿಕಾರಿ ಎ. ಜೆಬಾಸ್ಟಿನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ ಎಂದು ವರದಿಗಳು ತಿಳಿಸಿವೆ. ಬಿಕ್ಕಟ್ಟಿನ ಸಮಯದಲ್ಲಿ ಪರಿಸ್ಥಿತಿಯನ್ನು ಪರಿಣಾಮಕಾರಿ ನಿರ್ವಹಣೆ ಮಾಡಲು ನೋಡಲ್ ಅಧಿಕಾರಿಗೆ ಮಾಹಿತಿ ನೀಡುವಂತೆ ಗೋವಾ ಸರ್ಕಾರವು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಉಭಯ ರಾಜ್ಯಗಳ ನೋಡಲ್ ಅಧಿಕಾರಿಗಳು ನೈಜ-ಸಮಯದ ಮಾಹಿತಿಯನ್ನು ಹಂಚಿಕೊಳ್ಳುವುದರಿAದ ಅಧಿಕಾರಿಗಳು ಎಚ್ಚರಿಕೆಯನ್ನು ಕಾಯ್ದುಕೊಳ್ಳಲು ಹಾಗೂ ನಿರ್ಣಾಯ ಸಮಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲು ಸಹಾಯ ಮಾಡುತ್ತದೆ. ಕಾಡ್ಗಿಚ್ಚು ಆತಂಕ ಹಿನ್ನೆಲೆಯಲ್ಲಿ ಈಗಾಗಲೇ ಗೋವಾ ಮತ್ತು ಕರ್ನಾಟಕ ನಡುವಿನ ಗಡಿಯಲ್ಲಿ ಗಸ್ತು ತಿರುಗುವಂತೆ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ತಾ. ೧೪ ರಂದು ಸಂಜೆ ೪ ಗಂಟೆಯವರೆಗೆ ಅಗ್ನಿ ಅವಘಡಗಳು ಕಂಡುಬAದಿಲ್ಲ. ಸುಮಾರು ೩೦೦ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಡೆರೊಡೆಮ್, ಸುರ್ಲಾ ಮ್ಹಡೆ ಮುಂತಾದ ಪ್ರದೇಶಗಳಲ್ಲಿ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.