ಮಡಿಕೇರಿ, ಮಾ. ೧೫: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ತಾ. ೧೮ ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದ್ದು, ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಎಲ್ಲಾ ಹಂತದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಸಿದ್ಧತೆಗೆ ಸಂಬAಧಿಸಿದAತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಫಲಾನುಭವಿಗಳ ಸಮ್ಮೇಳನವು ಸರ್ಕಾರದ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಫಲಾನುಭವಿಗಳ ಸಮ್ಮೇಳನ ಜೊತೆಗೆ ನಗರದಲ್ಲಿ ನಿರ್ಮಾಣವಾಗಿರುವ ಗಾಂಧಿ ಭವನ, ಗ್ರೇಟರ್ ರಾಜಸೀಟು ಉದ್ಯಾನವನ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬಿ.ಸಿ. ನಾಗೇಶ್ ಹೇಳಿದರು.
ಕಾರ್ಯಕ್ರಮ ಸಂಬAಧ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಹಂತದ ಅಧಿಕಾರಿಗಳು ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ, ಪರಿಶಿಷ್ಟ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಕಾರ್ಮಿಕ, ಅಲ್ಪಸಂಖ್ಯಾತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ, ಕಂದಾಯ, ಸಾರ್ವಜನಿಕ ಶಿಕ್ಷಣ, ಪೌರಾಡಳಿತ, ಸೆಸ್ಕ್, ನಗರ ಕುಡಿಯುವ ನೀರು ಪೂರೈಕೆ ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸೌಲಭ್ಯ ಪಡೆದಿರುವ ಹಾಗೂ ಪಡೆಯುವ ಫಲಾನುಭವಿಗಳನ್ನು ಆಹ್ವಾನಿಸುವಂತೆ ತಿಳಿಸಿದರು.
ಫಲಾನುಭವಿಗಳ ಆಹ್ವಾನ, ವೇದಿಕೆ ನಿರ್ಮಾಣ, ಕುಡಿಯುವ ನೀರು, ಮಧ್ಯಾಹ್ನ ಉಪಹಾರ ಮತ್ತಿತರ ಸಿದ್ಧತೆ ಬಗ್ಗೆ ಸಚಿವರು ಮಾಹಿತಿ ಪಡೆದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಇನ್ನೂ ಹಲವು ಕಾಮಗಾರಿಗಳು ಉದ್ಘಾಟನೆಗೆ ಸಿದ್ಧವಾಗಿದ್ದು, ಅವುಗಳನ್ನು ಸೇರಿಸುವಂತೆ ಸಲಹೆ ನೀಡಿದರು.
ಫಲಾನುಭವಿಗಳ ಸಮ್ಮೇಳನ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮವು ಸರ್ಕಾರದ್ದಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಮುತುವರ್ಜಿ ವಹಿಸಿ, ಸಮ್ಮೇಳನ ಯಶಸ್ಸಿಗೆ ಮುಂದಾಗುವAತೆ ಶಾಸಕರು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಪ್ರತಿಯೊಬ್ಬರೂ ಸರ್ಕಾರದ ಸೌಲಭ್ಯಗಳ ಒಂದಲ್ಲ ಒಂದು ಫಲಾನುಭವಿಗಳಾಗಿದ್ದಾರೆ ಎಂದರು.
(ಮೊದಲ ಪುಟದಿಂದ) ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಜಿಲ್ಲೆಯಲ್ಲಿ ೫೦ ಸೆಂಟ್ಗಿAತ ಕಡಿಮೆ ಭೂಮಿ ಹೊಂದಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಹೇಳಿದರು.
ನಂಜರಾಯಪಟ್ಟಣ, ಶಿರಂಗಾಲ, ಹೊಸಪಟ್ಟಣ, ರಂಗಸಮುದ್ರ ಇತರೆ ಅರಣ್ಯ ವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಅಪ್ಪಚ್ಚು ರಂಜನ್ ಸೂಚಿಸಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ .ಸತೀಶ ಅವರು ೫೦ ಸೆಂಟ್ಗಿAತ ಹೆಚ್ಚು ಭೂಮಿ ಹೊಂದಿರುವ ಅರ್ಜಿಗಳ ಸಂಬAಧ ಮರು ಪರಿಶೀಲನೆ ಮಾಡಲು ಸೂಚಿಸಲಾಗಿದೆ. ೫೦ ಸೆಂಟ್ಗಿAತ ಕಡಿಮೆ ಭೂಮಿ ಹೊಂದಿರುವ ಅರ್ಜಿಗಳ ಸಂಬAಧ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಅನುಮೋದನೆ ಆಗಿದೆ ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಅವರು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ೬೧೫ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಕುರಿತು ಧ್ವನಿಗೂಡಿಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಇತರೆ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬAಧ ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.
ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿ.ಪಂ. ಸಿಇಓ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳು ಹಾಗೂ ಫಲಾನುಭವಿಗಳ ಮಾಹಿತಿ ನೀಡಿದರು.
ಮುಖ್ಯಮಂತ್ರಿಗಳು ತಾ. ೧೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಫಲಾನುಭವಿಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ ೨.೩೦ ಗಂಟೆಗೆ ನಾಪೋಕ್ಲಿನಲ್ಲಿ ನಡೆಯಲಿರುವ ಅಪ್ಪಚೆಟ್ಟೋಳಂಡ ಹಾಕಿ ನಮ್ಮೆಯನ್ನು ಉದ್ಘಾಟಿಸಲಿದ್ದಾರೆ.