ಮಡಿಕೇರಿ, ಮಾ. ೧೬: ಮಡಿಕೇರಿಯಲ್ಲಿ ರಾಜ್ಯದ ವಿವಿಧ ಫಲಾನುಭವಿ ಆಧಾರಿತ ಯೋಜನೆ ಫಲಾನುಭವಿಗಳ ಜಿಲ್ಲಾಮಟ್ಟದ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರ ಗಣ್ಯರು ಆಗಮಿಸುವ ಹಿನ್ನೆಲೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ನಿಗಮದಿಂದ ಸುಮಾರು ೧೦೩ ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತ ಕೋರಿದ್ದು, ಅದರಂತೆ ಕಾರ್ಯಕ್ರಮಕ್ಕೆ ನಿಗಮದ ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.

ಅಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈ ದಿಸೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ - ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ಕೋರಿದ್ದಾರೆ.