ಮಡಿಕೇರಿ, ಮಾ. ೧೫: ಶಾಸಕ ಕೆ.ಎಸ್.ಈಶ್ವರಪ್ಪ ಅಝಾನ್ ಹಾಗೂ ಅಲ್ಲಾಹುವಿನ ಬಗ್ಗೆ ಅವಹೇಳನಕಾರಿ ಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಚೌಕಿಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ಅಬ್ದುಲ್ಲಾ ಅಡ್ಕರ್ ಮಾತನಾಡಿ, ಗೋಣಿಕೊಪ್ಪಲುವಿನಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಈಶ್ವರಪ್ಪ ಅವರ ವಿರುದ್ಧ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಶ್ವರಪ್ಪ ಕ್ಷಮೆಕೋರದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ಪ್ರಮುಖರಾದ ಅಮಿನ್ ಮೊಹಿಸಿನ್, ಮನ್ಸೂರ್, ಬಷೀರ್ ಅಹ್ಮದ್, ಮೈಕಲ್ ವೇಗಸ್ ಮತ್ತಿತರರು ಪಾಲ್ಗೊಂಡಿದ್ದರು.